Dailyhunt Logo
  • Light mode
    Follow system
    Dark mode
    • Play Story
    • App Story
ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೊ ಪ್ರಕರಣದ ತನಿಖಾ ಅಧಿಕಾರಿ ವರ್ಗಾವಣೆ

ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೊ ಪ್ರಕರಣದ ತನಿಖಾ ಅಧಿಕಾರಿ ವರ್ಗಾವಣೆ

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ವರ್ಗಾವಣೆ ಮಾಡಲಾಗಿದೆ.

ವಚನಾನಂದ ಸ್ವಾಮೀಜಿ ವಸತಿ ನಿಲಯದ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಮಂಜುಳಾ ಅವರನ್ನು ವರ್ಗಾವಣೆ ಮಾಡಲಾಗಿದೆ.

ಪಿಎಸ್‌ಐ ಮಂಜುಳಾ ಅವರ ಲಿಖಿತ ಮನವಿ ಪರಿಗಣಿಸಿ ಆಡಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಮಾಡಲಾಗಿದೆ. ಮಂಜುಳಾ ಅವರನ್ನು ಆಜಾದ್ ನಗರ ಪೊಲೀಸ್ ಠಾಣೆಗೆ ತನಿಖಾ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಆ ಸ್ಥಾನದಲ್ಲಿದ್ದ ಜಯರತ್ನಮ್ಮ ಅವರನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಪ್ರಕರಣದ ತನಿಖೆಯನ್ನು ಹರಿಹರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಸಗರಿ ಅವರಿಗೆ ವಹಿಸಲಾಗಿದೆ ಎಂದು ಎಸ್ಪಿ ಹೆಚ್.ಟಿ. ಶೇಖರ್ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: BC Suddi