ಬೆಂಗಳೂರು: ಎನ್‍ಟಿಎಸ್ ಮೊದಲನೇ ಹಂತದ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸ್ತುತ 10ನೇ ತರಗತಿಯಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ತೆಗೆದುಕೊಳ್ಳಬಹುದಾಗಿದೆ.
ಪರೀಕ್ಷೆ 2021ನೇ ಜನವರಿ 24ರಂದು ನಡೆಯಲಿದೆ. ವಿದ್ಯಾರ್ಥಿವೇತನ ಪಡೆಯುವ ಹಿನ್ನೆಲೆಯಲ್ಲಿ ಈ ಪರೀಕ್ಷೆ ನಡೆಯಲಿದೆ. ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ kseeb.kar.nic.in ಅಥವಾ 080-23341615 ಕರೆ ಮಾಡಬಹುದಾಗಿದೆ.

