Dailyhunt Logo
  • Light mode
    Follow system
    Dark mode
    • Play Story
    • App Story
ಬಹುನಿರೀಕ್ಷಿತ Xiaomi 17T ಸ್ಮಾರ್ಟ್‌ಫೋನ್‌ ಬಿಡುಗಡೆಗೆ ದಿನಾಂಕ ಫಿಕ್ಸ್! ಜಬರ್ದಸ್ತ್‌ ಕ್ಯಾಮೆರಾ

ಬಹುನಿರೀಕ್ಷಿತ Xiaomi 17T ಸ್ಮಾರ್ಟ್‌ಫೋನ್‌ ಬಿಡುಗಡೆಗೆ ದಿನಾಂಕ ಫಿಕ್ಸ್! ಜಬರ್ದಸ್ತ್‌ ಕ್ಯಾಮೆರಾ

Digit 2 weeks ago

ನಪ್ರಿಯ ಶಿಯೋಮಿ ಕಂಪನಿಯು ಇದೀಗ ಹೊಸದಾಗಿ Xiaomi 17T ಹೆಸರಿನ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ನೂತನ ಸ್ಮಾರ್ಟ್‌ಫೋನ್‌ ಪ್ರಿಮಿಯಂ ರೇಂಜ್‌ನಲ್ಲಿ ಲಗ್ಗೆ ಇಡುವ ಸಾಧ್ಯತೆಗಳು ಇವೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ SoC ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಒಳಗೊಂಡಿರಲಿದೆ ಎನ್ನಲಾಗಿದೆ.

ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿರಲಿದೆ. ಇನ್ನು ಈ ಫೋನ್‌ AMOLED ಜೊತೆಗೆ 120Hz ರಿಫ್ರೆಶ್ ರೇಟ್‌ ಸೌಲಭ್ಯ ಪಡೆದಿರಲಿದೆ. ಅಲ್ಲದೇ ಲೈಕಾ-ಟ್ಯೂನ್ಡ್ ಕ್ಯಾಮೆರಾ ಸಿಸ್ಟಮ್‌ ರಚನೆ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಹಾಗಾದರೆ ಮುಂಬರುವ ಶಿಯೋಮಿ 17T ಸ್ಮಾರ್ಟ್‌ಫೋನಿನ ನಿರೀಕ್ಷಿತ ಫೀಚರ್ಸ್‌ ಹಾಗೂ ಬೆಲೆಯ ಬಗ್ಗೆ ಮುಂದೆ ತಿಳಿಯೋಣ.

Also Read : Vi ಟೆಲಿಕಾಂನ 56 ದಿನಗಳ ವ್ಯಾಲಿಡಿಟಿಯ ಈ ಪ್ಲಾನ್‌ಗಳಲ್ಲಿ ಯಾವುದು ಬೆಸ್ಟ್‌?

Xiaomi 17T ಲಾಂಚ್‌ ಯಾವಾಗ?

ಶಿಯೋಮಿ ಸಂಸ್ಥೆಯ ಈ ಬಹುನಿರೀಕ್ಷಿತ ಮೊಬೈಲ್‌ ಇದೇ ಜೂನ್‌ 4 ರಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಲಾಂಚ್ ಕುರಿತು ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಮೈಕ್ರೋಪೇಜ್‌ ಸಹ ತೆರೆಯಲಾಗಿದೆ. ಇನ್ನು ಈ ಫೋನ್‌ 12GB RAM + 256GB ಹಾಗೂ 12GB + 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ ಎನ್ನಲಾಗಿದೆ. ಇನ್ನು ಈ ಫೋನಿನ ಆರಂಭಿಕ ವೇರಿಯಂಟ್‌ ಬೆಲೆಯು 65,999 ರೂ.ಗಳ ಆಸುಪಾಸಿನಲ್ಲಿ ಇರಬಹುದು ಎಂದು ಅಂದಾಜಿಸಲಾಗಿದೆ.

ಶಿಯೋಮಿ 17T ನಿರೀಕ್ಷಿತ ಫೀಚರ್ಸ್‌ ಮಾಹಿತಿ

ಶಿಯೋಮಿ 17T ಮೊಬೈಲ್‌ 6.59 ಇಂಚಿನ 1.5K AMOLED ಡಿಸ್‌ಪ್ಲೇ ಒಳಗೊಂಡಿರಲಿದ್ದು ಇದರೊಂದಿಗೆ 120Hz ರಿಫ್ರೆಶ್ ದರ, HDR10+, ಡಾಲ್ಬಿ ವಿಷನ್ ಆಯ್ಕೆಗಳನ್ನು ಪಡೆದಿರಲಿದೆ. ಅಲ್ಲದೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ SoC ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB + 512GB ವೇರಿಯಂಟ್‌ ಆಯ್ಕೆಗಳನ್ನು ಪಡೆದಿರುವ ಸಾಧ್ಯತೆಗಳು ಇವೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 16 ಆಧಾರಿತ ಹೈಪರ್‌ಓಎಸ್ 3 ಅನ್ನು ರನ್ ಮಾಡಬಹುದು.

ಶಿಯೋಮಿ 17T ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಪಡೆದಿರಲಿದೆ. ಹಾಗೆಯೇ ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 12MP ಅಲ್ಟ್ರಾ ವೈಡ್ ಲೆನ್ಸ್ ಹಾಗೂ 50MP ಪೆರಿಸ್ಕೋಪ್ ಟೆಲಿಫೋಟೋ ಸೆನ್ಸಾರ್‌ನಲ್ಲಿ ಇರಬಹುದು ಎನ್ನಲಾಗಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32MP ಸೆನ್ಸಾರ್‌ನ ಕ್ಯಾಮೆರಾ ಹೊಂದಿರಬಹುದು ಎನ್ನಲಾಗಿದೆ. ಅಲ್ಲದೇ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಇರಲಿದ್ದು, ಇದಕ್ಕೆ ಅನುಗುಣವಾಗಿ 67W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ನೀಡಬಹುದು.

Read more news like this on www.digit.in

Dailyhunt
Disclaimer: This content has not been generated, created or edited by Dailyhunt. Publisher: Digit kannada