Dailyhunt Logo
  • Light mode
    Follow system
    Dark mode
    • Play Story
    • App Story
ದೇಶೀಯ ಮಾರುಕಟ್ಟೆಯಲ್ಲಿ Realme 16T ಸ್ಮಾರ್ಟ್‌ಫೋನ್‌ ಬಿಡುಗಡೆ! 8,000mAh ಬ್ಯಾಟರಿ

ದೇಶೀಯ ಮಾರುಕಟ್ಟೆಯಲ್ಲಿ Realme 16T ಸ್ಮಾರ್ಟ್‌ಫೋನ್‌ ಬಿಡುಗಡೆ! 8,000mAh ಬ್ಯಾಟರಿ

Digit 1 day ago

ರಿಯಲ್‌ಮಿ ಕಂಪನಿಯ ಬಹುನಿರೀಕ್ಷಿತ Realme 16T ಮೊಬೈಲ್‌ ಇಂದು (ಮೇ 19 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಈ ನೂತನ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಹೈಲೈಟ್‌ಗಳಲ್ಲಿ ಒಂದಾಗಿದೆ.

ಹಾಗೆಯೇ ಇದು ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಸ್ಟಾರ್‌ಲೈಟ್ ಬ್ಲಾಕ್, ಸ್ಟಾರ್‌ಲೈಟ್ ಬ್ಲೂ ಮತ್ತು ಸ್ಟಾರ್‌ಲೈಟ್ ರೆಡ್ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹಾಗಾದರೇ ರಿಯಲ್‌ಮಿ 16T 5G ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಇರುವ Airtel ಟೆಲಿಕಾಂನ ಬೆಸ್ಟ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ!

Realme 16T ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ರಿಯಲ್‌ಮಿ ಕಂಪನಿಯ ರಿಯಲ್‌ಮಿ 16T 5G ಮೊಬೈಲ್‌ ಎರಡು ವೇರಿಯಂಟ್‌ ಆಯ್ಕೆಗಳಲ್ಲಿ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಈ ಮೊಬೈಲ್‌ನ 6GB + 128GB ಸ್ಟೋರೇಜ್‌ ವೇರಿಯಂಟ್‌ 29,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 31,999 ರೂ.ಗಳು ಆಗಿದೆ. ಹಾಗೆಯೇ 8GB + 256GB ವೇರಿಯಂಟ್‌ ಬೆಲೆಯು 34,999 ರೂ.ಗಳು ಆಗಿದೆ. ಇನ್ನು ಈ ಫೋನ್‌ ಸ್ಟಾರ್‌ಲೈಟ್ ಬ್ಲಾಕ್, ಸ್ಟಾರ್‌ಲೈಟ್ ಬ್ಲೂ ಮತ್ತು ಸ್ಟಾರ್‌ಲೈಟ್ ರೆಡ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್‌ ಇದೇ ಮೇ 27 ರಿಂದ ಫ್ಲಿಪ್‌ಕಾರ್ಟ್ ತಾಣದಲ್ಲಿ ಲಭ್ಯವಿರುತ್ತವೆ.

ರಿಯಲ್‌ಮಿ 16T 5G ಮೊಬೈಲ್‌ ಫೀಚರ್ಸ್‌

ರಿಯಲ್‌ಮಿ 16T 5G ಮೊಬೈಲ್‌ 6.8 ಇಂಚಿನ LCD ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ 144Hz ರಿಫ್ರೆಶ್ ರೇಟ್‌ ಹಾಗೂ 1,200 nits ಬ್ರೈಟ್‌ನೆಸ್ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಬ್ರೈಟ್‌ನೆಸ್ DC ಡಿಮ್ಮಿಂಗ್, ಡಾರ್ಕ್ ಮೋಡ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 6GB + 128GB, 8GB + 128GB ಹಾಗೂ 8GB + 256GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ ರಿಯಲ್‌ಮಿ UI 7 ಸಹ ಪಡೆದಿದೆ.

ರಿಯಲ್‌ಮಿ 16T 5G ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 45W SuperVOOC ಚಾರ್ಜಿಂಗ್ ಹಾಗೂ 6.5W ರಿವರ್ಸ್ ಚಾರ್ಜಿಂಗ್‌ ಬೆಂಬಲ ಹೊಂದಿದೆ.

Read more news like this on www.digit.in

Dailyhunt
Disclaimer: This content has not been generated, created or edited by Dailyhunt. Publisher: Digit kannada