Dailyhunt
ಕಡಿಮೆ ಬೆಲೆಯ TECNO POP X ಸ್ಮಾರ್ಟ್‌ಫೋನ್‌ ಈಗ ಇನ್ನಷ್ಟು ಅಗ್ಗದ ಬೆಲೆಗೆ ಲಭ್ಯ!

ಕಡಿಮೆ ಬೆಲೆಯ TECNO POP X ಸ್ಮಾರ್ಟ್‌ಫೋನ್‌ ಈಗ ಇನ್ನಷ್ಟು ಅಗ್ಗದ ಬೆಲೆಗೆ ಲಭ್ಯ!

Digit 2 weeks ago

ಲೀಡಿಂಗ್ ಇ ಕಾಮರ್ಸ್‌ ತಾಣ ಎನಿಸಿಕೊಂಡಿರುವ ಅಮೆಜಾನ್‌ ಮೊಬೈಲ್‌ಗಳಿಗೆ ಒಂದಿಲ್ಲೊಂದು ಡಿಸ್ಕೌಂಟ್‌ ನೀಡುತ್ತದೆ. ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಟೆಕ್ನೋ ಸಂಸ್ಥೆಯ TECNO POP X ಮೊಬೈಲ್‌ ಭರ್ಜರಿ ಬೆಲೆ ಇಳಿಕೆ ದರದಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ.

ಟೆಕ್ನೋ ಸಂಸ್ಥೆಯ ಈ ಮೊಬೈಲ್‌ ಆಕ್ಟಾ ಕೋರ್ UNISOC T7250 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಹಾಗೆಯೇ ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಟೆಕ್ನೋ ಪಾಪ್ X ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಮೇ 6 ರಂದು ದೈತ್ಯ Vivo X300 Ultra ಮೊಬೈಲ್‌ ಬಿಡುಗಡೆ! 200MP ಕ್ಯಾಮೆರಾ ಹೈಲೈಟ್‌

TECNO POP X ಮೊಬೈಲ್‌ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್‌

ಇತ್ತೀಚಿಗೆ ಬಿಡುಗಡೆ ಆಗಿರುವ ಟೆಕ್ನೋ ಪಾಪ್ X ಮೊಬೈಲ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಡಿಸ್ಕೌಂಟ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 4GB RAM + 128 GB ವೇರಿಯಂಟ್‌ 27,999 ರೂ.ಗಳ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಆದರೆ ಪ್ರಸ್ತುತ ಅಮೆಜಾನ್‌ನಲ್ಲಿ 15,999 ರೂ.ಗಳ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಈ ಫೋನ್‌ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ ಚಿಲ್ಲಿ ಗ್ರೀನ್‌ ಮತ್ತು ವೈಟ್‌ ಕಲರ್‌ ಆಯ್ಕೆಯನ್ನು ಪಡೆದುಕೊಂಡಿದೆ.

ಟೆಕ್ನೋ ಪಾಪ್ X ಫೋನ್‌ ಫೀಚರ್ಸ್‌ ಹೀಗಿವೆ

ನೂತನ ಟೆಕ್ನೋ ಪಾಪ್ X ಮೊಬೈಲ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್‌ 20:9 ಸ್ಕ್ರೀನ್ ಅನುಪಾತ ಹೊಂದಿರುವ ಜೊತೆಗೆ 1600 x 720 ಪಿಕ್ಸೆಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ ಈ ನೂತನ ಫೋನ್‌ ಕ್ವಾಲ್ಕಾಮ್ 1.8 GHz ಆಕ್ಟಾ ಕೋರ್ UNISOC T7250 12nm ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ.

ಇನ್ನು ಟೆಕ್ನೋ ಪಾಪ್ X ಮೊಬೈಲ್‌ 15W ವೈರ್ಡ್ ಚಾರ್ಜಿಂಗ್ ಬೆಂಬಲಿತ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾವನ್ನು ನೀಡಲಾಗಿದೆ. ಇದರ ಜೊತೆಗೆ ಈ ಮೊಬೈಲ್‌ ಧೂಳು ಮತ್ತು ಸ್ಪ್ಲಾಶ್ ನಿರೋಧಕಕ್ಕಾಗಿ IP64 ರೇಟಿಂಗ್ ಪಡೆದುಕೊಂಡಿದೆ.

Disclosure: This Article Contains Affiliate Links

Read more news like this on www.digit.in

Dailyhunt
Disclaimer: This content has not been generated, created or edited by Dailyhunt. Publisher: Digit kannada