ಬೆಂಗಳೂರು,ಸೆ.30- ರಾಜ್ಯದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ವರ್ಷಗಳೇ ಕಳೆದರೂ ಬಿಲ್ ಪಾವತಿಯಾಗಿಲ್ಲ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಸುಮಾರು 38 ಸಾವಿರ ಕೋಟಿ ರೂ. ಬಾಕಿ ಮೊತ್ತವನ್ನು ಡಿಸೆಂಬರ್ ಅಂತ್ಯದೊಳಗೆ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಗಡುವು ನೀಡಿದೆ.
ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಸಂಘ ಎಚ್ಚರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಘದ ಅಧ್ಯಕ್ಷ ಆರ್. ಮಂಜುನಾಥ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 10 ದಿನಗಳ ಹಿಂದೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.
ಸುಮಾರು 1.5 ಲಕ್ಷ ಗುತ್ತಿಗೆದಾರರು ಹಲವು ವರ್ಷಗಳಿಂದ ಬಾಕಿ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಅವರು ತಿಳಿಸಿದರು.ಸಂಘದ ಅಂಕಿ-ಅಂಶಗಳ ಪ್ರಕಾರ, ಲೋಕೋಪಯೋಗಿ ಇಲಾಖೆಯಲ್ಲಿ 8,370 ಕೋಟಿ, ಜಲಸಂಪನೂಲ ಇಲಾಖೆಯಲ್ಲಿ 14,000 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 3,000 ಕೋಟಿ, ಸಣ್ಣ ನೀರಾವರಿಯಲ್ಲಿ 3,600 ಕೋಟಿ, ನಗರಾಭಿವೃದ್ಧಿಯಲ್ಲಿ 1,800 ಕೋಟಿ, ವಸತಿ ಮತ್ತು ವಕ್‌್ಫ ಇಲಾಖೆಯಲ್ಲಿ 2,600 ಕೋಟಿ, ಕಾರ್ಮಿಕ ಇಲಾಖೆಯಲ್ಲಿ 2,000 ಕೋಟಿ ಹಾಗೂ ಬಿಬಿಎಂಪಿಯಲ್ಲಿ 2,600 ಕೋಟಿ ಬಾಕಿ ಇದೆ. ಒಟ್ಟು ಬಾಕಿ ಮೊತ್ತ ಸುಮಾರು 37,980 ಕೋಟಿ ಎಂದು ಸಂಘ ತಿಳಿಸಿದೆ.
ಜೂನ್ 30ರಂದು ಮುಖ್ಯಮಂತ್ರಿ ಅವರೊಂದಿಗೆ ನಡೆದ ಸಭೆಯಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಎರಡು ತಿಂಗಳೊಳಗೆ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿತ್ತು. ಆದರೆ ಗಡುವು ಕಳೆದರೂ ಹಣ ಬಿಡುಗಡೆಯಾಗಿಲ್ಲ ಎಂದು ಮಂಜುನಾಥ್ ಆರೋಪಿಸಿದರು. ಕೆಲವು ಕಾಮಗಾರಿಗಳು ಪೂರ್ಣಗೊಂಡು ಎರಡು ವರ್ಷ ಕಳೆದಿದ್ದರೂ ಬಿಲ್ ಪಾವತಿಯಾಗಿಲ್ಲ ಎಂದರು.
ಬಿಲ್ ಪಾವತಿ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕೊರತೆಯಿದೆ ಎಂದು ಸಂಘ ಆರೋಪಿಸಿದೆ. ಕೆಲವು ಕಡೆ ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಕಮಿಷನ್ ನೀಡಿದರೆ ಮಾತ್ರ ಬಿಲ್ ಮಾಡಲಾಗುತ್ತಿದೆ ಎಂಬ ಆರೋಪವನ್ನೂ ಮಂಜುನಾಥ್ ಮಾಡಿದರು. ಮುಖ್ಯಮಂತ್ರಿ ಸಭೆ ಕರೆದರೆ ಯಾವ ಇಲಾಖೆಯಲ್ಲಿ ಎಷ್ಟು ಪರ್ಸೆಂಟೇಜ್ ಕೇಳಲಾಗುತ್ತಿದೆ ಎಂಬುದನ್ನು ಬಹಿರಂಗಪಡಿಸುವುದಾಗಿ ಹಾಗೂ ಅಗತ್ಯವಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಎಚ್ಚರಿಸಿದರು.
ಸರ್ಕಾರ ಕ್ರಮ ಕೈಗೊಳ್ಳದಿದ್ದರೆ 31 ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳವರೆಗೆ ಪಾದಯಾತ್ರೆ ನಡೆಸುವುದಾಗಿ ಸಂಘ ತಿಳಿಸಿದೆ. ಡಿಸೆಂಬರ್ ಅಂತ್ಯದೊಳಗೆ ಬಾಕಿ ಹಣ ಬಿಡುಗಡೆ ಮಾಡಬೇಕು.ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಮಂಜುನಾಥ್ ಹೇಳಿದರು.ಈ ಆರೋಪಗಳಿಗೆ ಸರ್ಕಾರದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ.
ಬೆಂಗಳೂರು,ಸೆ.30- ರಾಜ್ಯದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ವರ್ಷಗಳೇ ಕಳೆದರೂ ಬಿಲ್ ಪಾವತಿಯಾಗಿಲ್ಲ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಸುಮಾರು 38 ಸಾವಿರ ಕೋಟಿ ರೂ. ಬಾಕಿ ಮೊತ್ತವನ್ನು ಡಿಸೆಂಬರ್ ಅಂತ್ಯದೊಳಗೆ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಗಡುವು ನೀಡಿದೆ.

