ಬೆಂಗಳೂರು,ಅ.25-ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ವೃದ್ಧೆಯ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಹೊಸಗುಡ್ಡದಹಳ್ಳಿಯ ಟಿ ಕ್ರಾಸ್ನ ನಿವಾಸಿ ವೆಂಕಟಲಕ್ಷ್ಮಮ್ಮ(70) ಎಂಬ ವೃದ್ಧೆಯನ್ನು ದುಷ್ಕರ್ಮಿಗಳು ಮನೆಯಲ್ಲಿಯೇ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಆರೋಪಿಗಳು ಈ ಮನೆಯಿಂದ ಹಣ, ಆಭರಣಗಳನ್ನು ತೆಗೆದುಕೊಂಡು ಹೋಗಿರುವ ಬಗ್ಗೆ ನಿಖರ ಮಾಹಿತಿ ಪೊಲೀಸರಿಗೆ ಸದ್ಯಕ್ಕೆ ತಿಳಿದು ಬಂದಿಲ್ಲ.ವೆಂಕಟಲಕ್ಷ್ಮಮ ಅವರ ಪತಿ ಹಾಗೂ ಇದ್ದ ಒಬ್ಬಳೇ ಮಗಳು ಸಹ ಮೃತಪಟ್ಟಿದ್ದಾರೆ. ಹಾಗಾಗಿ ಇವರೊಬ್ಬರೇ ಮನೆಯಲ್ಲಿ ವಾಸವಾಗಿದ್ದರು.ಈ ವೃದ್ಧೆಯನ್ನು ಯಾವ ಕಾರಣಕ್ಕಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂಬುವುದು ಸಹ ಸದ್ಯಕ್ಕೆ ಗೊತ್ತಾಗಿಲ್ಲ.
ಅ.23 ರಂದು ಮಧ್ಯಾಹ್ನ ಇವರ ಮನೆಗೆ ಬಂದ ದುಷ್ಕರ್ಮಿಗಳು ವೆಂಕಟಲಕ್ಷ್ಮಮ ಅವರ ತಲೆಗೆ ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.ಪಕ್ಕದ ಮನೆಯವರು ಇವರು ಮನೆಯಿಂದ ಹೊರಗೆ ಬಾರದಿರುವುದನ್ನು ತಿಳಿದು ನಿನ್ನೆ ಅವರ ಮನೆ ಬಳಿ ಹೋಗಿ ನೋಡಿದಾಗ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಬ್ಯಾಟರಾಯನಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೊಲೆ ಮೊಕದ್ದಮೆ ದಾಖಲಿಸಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.