Dailyhunt
ಭಾರತದಲ್ಲಿ 3.30 ಕೋಟಿ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಭಾರತದಲ್ಲಿ 3.30 ಕೋಟಿ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಈ ಸಂಜೆ 4 years ago

ನವದೆಹಲಿ, ಸೆ.7- ದೇಶದಲ್ಲಿ ಕೊರೊನಾ ಸೋಂಕಿಗೆ ಸಂಪೂರ್ಣ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ನಿನ್ನೆಯಿಂದ ಮತ್ತೆ 31,222 ಮಂದಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಒಟ್ಟು ಸೋಂಕಿತರ ಸಂಖ್ಯೆ 3.30 ಕೋಟಿ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 290 ಮಂದಿ ಮಹಾಮಾರಿಗೆ ಬಲಿಯಾಗಿರುವುದರಿಂದ ಒಟ್ಟು ಸಾವಿನ ಸಂಖ್ಯೆ 4.41 ಲಕ್ಷದ ಗಡಿ ಮೀರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣದಲ್ಲಿ ಸ್ವಲ್ಪ ಏರಿಕೆ ಕಂಡು ಬಂದಿರುವುದರಿಂದ ಸಕ್ರಿಯ ಸೋಂಕು ಪ್ರಕರಣಗಳು ನಾಲ್ಕು ಲಕ್ಷದೊಳಗಿರುವುದು ವಿಶೇಷ.

ಸಾವಿನ ಪ್ರಮಾಣದಲ್ಲಿ ಹಾವು ಏಣಿ ಆಟ ಮುಂದುವರೆದಿರುವುದರಿಂದ ಮರಣ ಪ್ರಮಾಣ ಶೇ.1.33 ರಷ್ಟಿದೆ.

Dailyhunt
Disclaimer: This content has not been generated, created or edited by Dailyhunt. Publisher: eesanje