Saturday, 23 Jan, 10.19 pm ಈ ಸಂಜೆ

ಬೆಂಗಳೂರು ನಗರ
ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ

ಬೆಂಗಳೂರು,ಜ.23-ರಾಜ್ಯದಲ್ಲಿ ಮುಂಬರುವ ತಾಲ್ಲೂಕು, ಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಂಘಟಿತವಾಗಿ ಕೆಲಸ ಮಾಡುತ್ತಿದೆ. ಈಗಾಗಲೇ ಅನೇಕ ಜಿಲ್ಲಾಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಯುವ ಜನತೆ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲೂ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಮಾದರಿಗೆ ರಾಷ್ಟದ ಜನ ಮನಸೋತಿದ್ದಾರೆ.

ಬಿಜೆಪಿ ಕಾಂಗ್ರೆಸ್ ಹೊರತಾಗಿ ಪರ್ಯಾಯ ರಾಜಕೀಯ ಪಕ್ಷವನ್ನು ಎದುರು ನೋಡುತ್ತಿದ್ದು, ಇದಕ್ಕೆ ಉದಾಹರಣೆಯಾಗಿ ಇತ್ತೀಚೆಗೆ ರಾಷ್ಟ್ರದಾದ್ಯಂತ ಅನೇಕ ರಾಜ್ಯಗಳಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿರುವುದು ಬದಲಾವಣೆಯ ಮುನ್ನುಡಿ ಎಂದರು.

ಲೋಕಾಯುಕ್ತವನ್ನು ಹಾಳುಗೆಡವಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಯುತ್ತಿರುವ ಎಲ್ಲಾ ಭ್ರಷ್ಟಾಚಾರಗಳಿಗೆ ಮುನ್ನುಡಿ ಬರೆದರು. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಲೋಕಾಯುಕ್ತ ಮರಳಿ ತರುವುದಾಗಿ ಹೇಳಿದ್ದ ಯಡಿಯೂರಪ್ಪ ಅವರು ಈಗ ಲೋಕಾಯುಕ್ತವನ್ನೇ ಬಳಸಿಕೊಂಡು ತಮ್ಮ ಮೇಲಿದ್ದ ಭೂ ಹಗರಣವನ್ನೇ ಖುಲಾಸೆಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಯಡಿಯೂರಪ್ಪ ಅವರು ಲೋಕಾಯುಕ್ತವನ್ನು ದುರುಪಯೋಗ ಪಡಿಸಿಕೊಂಡರೂ ಕಿಂಚಿತ್ತೂ ಮಾತನಾಡದ ವಿರೋಧ ಪಕ್ಷಗಳು ತಮ್ಮ ಜವಾಬ್ದಾರಿ ಮರೆತಿವೆ. ಜಾತಿಗಳನ್ನು ಮುಂದಿಟ್ಟುಕೊಂಡು ಕೆಟ್ಟ ರಾಜಕಾರಣ ಮಾಡುತ್ತಿವೆ. ಇಂದು ಕರ್ನಾಟಕದ ಏಕೈಕ ವಿರೋಧ ಪಕ್ಷವಾಗಿ ಆಮ್ ಆದ್ಮಿ ಪಕ್ಷ ಮಾತ್ರ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಜೆಸಿಬಿ ಪಕ್ಷಗಳು ಸೇರಿ ಕರ್ನಾಟಕವನ್ನು ಹಾಳುಗೆಡವುತ್ತಿವೆ, ಜೆಸಿಬಿ ಸಾಕು ಕರ್ನಾಟಕದಲ್ಲಿ ಎಎಪಿ ಬೇಕು ಎಂದು ಇದೇ ವೇಳೆ ಅವರು ಘೋಷಿಸಿದರು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: eesanje
Top