Dailyhunt Logo
  • Light mode
    Follow system
    Dark mode
    • Play Story
    • App Story
BIG BREAKING : ಕೊನೆಗೂ ಹೈಕಮಾಂಡ್ ಆಜ್ಞೆಯಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ

BIG BREAKING : ಕೊನೆಗೂ ಹೈಕಮಾಂಡ್ ಆಜ್ಞೆಯಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ

Finally, Siddaramaiah announces resignation as CM as per the order of the high command

ಬೆಂಗಳೂರು, ಮೇ 28- ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನ ಇಂದು ಅಂತಿಮ ಘಟ್ಟಕ್ಕೆ ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ ಮತ್ತು ತಾವು ರಾಜೀನಾಮೆ ನೀಡುತ್ತಿರುವುದಾಗಿಯೂ ಘೋಷಿಸಿದ್ದಾರೆ.

ಇಂದು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಉಪಾಹಾರ ಕೂಟಕ್ಕೆ ಸಂಪುಟದ ಎಲ್ಲಾ ಸಚಿವರು ಹಾಜರಾಗಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ನಿನ್ನೆ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ಇಂದು ಬೆಳಗ್ಗೆ ಉಪಾಹಾರ ಕೂಟದಲ್ಲಿ ಭಾಗವಹಿಸಿದ್ದರು.

ಡಿ.ಕೆ.ಶಿವಕುಮಾರ್‌ ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತೀಯವಾಗಿ ಬರಮಾಡಿಕೊಂಡರು. ಈ ವೇಳೆ ಭಾವೋದ್ವೇಗಕ್ಕೆ ಒಳಗಾದ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಪರಸ್ಪರ ಆಲಂಗಿಸಿ, ಒಗ್ಗಟ್ಟು ಹಾಗೂ ಭ್ರಾತೃತ್ವ ಪ್ರದರ್ಶಿಸಿದ್ದಾರೆ.

ಉಪಾಹಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸಚಿವರನ್ನು ಉದ್ದೇಶಿಸಿ ಔಪಚಾರಿಕವಾಗಿ ಮಾತನಾಡಿದ್ದು, ಈವರೆಗೂ ಉತ್ತಮ ಆಡಳಿತ ನೀಡಲು ಸಹಕರಿಸಿದ್ದಕ್ಕಾಗಿ ಧನ್ಯವಾದ ಹೇಳಿದ್ದಾರೆ. ರಾಜಕಾರಣಕ್ಕೆ ಹೊಸ ಮುಖಗಳು, ಹೊಸ ಆಲೋಚನೆಗಳು ಬರಬೇಕು. ಜನ ಕಾಂಗ್ರೆಸ್‌‍ ಪಕ್ಷದ ಮೇಲೆ ಅಪಾರ ವಿಶ್ವಾಸ ಇರಿಸಿದ್ದು, ಅದನ್ನು ಮುಂದಿನ ದಿನಗಳಲ್ಲಿ ಉಳಿಸಿಕೊಳ್ಳಬೇಕು. ಕೋಮುವಾದಿ ಹಾಗೂ ವಿಚ್ಛಿದ್ರಕಾರಿ ಶಕ್ತಿಗಳು, ಜನರ ಶಾಂತಿ, ನೆಮದಿ ಕೆಡಿಸಲು ಅವಕಾಶ ನೀಡಬಾರದು ಎಂದು ಸಲಹೆ ನೀಡಿದ್ದಾರೆ.

ತಾವು ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ. ದೈಹಿಕ ಸಾಮರ್ಥ್ಯ ಇರುವವರೆಗೂ ಜನರ ಸೇವೆ ಮಾಡುತ್ತೇನೆ. ರಾಜಕೀಯವಾಗಿ ನನಗೆ ಈವರೆಗೂ ಸಹಕಾರ, ಸಲಹೆ ನೀಡಿದ ಎಲ್ಲರನ್ನು ಸರಿಸಿಕೊಳ್ಳುವುದಾಗಿ ಹೇಳಿದ್ದಾರೆ.

ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್‌‍ ಹೈಕಮಾಂಡ್‌ನ ಎಲ್ಲಾ ನಾಯಕರು ತಮಗೆ ಉತ್ತಮ ಸಹಕಾರ ನೀಡಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್‌‍ಗೆ ಒಳ್ಳೆಯ ಭವಿಷ್ಯ ಇದೆ. ಕೇಂದ್ರ ಸರ್ಕಾರದ ಈಗಿನ ದುರಾಡಳಿತದಿಂದ ಜನ ಬೇಸತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಮ ಸುದೀರ್ಘ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೇ ಕಳಂಕರಹಿತವಾಗಿ ನಡೆದುಕೊಂಡಿದ್ದೇನೆ. ಯಾರು ಎಷ್ಟೇ ಅಪಪ್ರಚಾರ ಮಾಡಿದ್ದರೂ, ಜನ ತಮ ಮೇಲೆ ವಿಶ್ವಾಸ ಇರಿಸಿದ್ದಾರೆ ಎಂದು ಸಚಿವರ ಉಪಾಹಾರ ಕೂಟದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದು ವಿದಾಯ ಭಾಷಣದಂತಿದ್ದು, ಮುಂದಿನ ರಾಜಕೀಯ ನಿರ್ಧಾರಗಳೇನೆಂದು ಕೆಲ ಸಚಿವರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ರಾಜಕಾರಣದಲ್ಲಿ ಅಧಿಕಾರ ಯಾರಿಗೂ ಶಾಶ್ವತವಲ್ಲ. ಇರುವ ಅವಕಾಶವನ್ನು ಬಳಸಿಕೊಂಡು ಉತ್ತಮವಾದ ಜನ ಸೇವೆ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು, ಮೇ 28- ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನ ಇಂದು ಅಂತಿಮ ಘಟ್ಟಕ್ಕೆ ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ ಮತ್ತು ತಾವು ರಾಜೀನಾಮೆ ನೀಡುತ್ತಿರುವುದಾಗಿಯೂ ಘೋಷಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: eesanje