Dailyhunt Logo
  • Light mode
    Follow system
    Dark mode
    • Play Story
    • App Story
BIG NEWS : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ

BIG NEWS : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ

ಈ ಸಂಜೆ 0 months ago

CM submits resignation to Lok Bhavan in Governor's absence

ಬೆಂಗಳೂರು, ಮೇ 28- ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಲೋಕಭವನ ಕಚೇರಿಗೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಅನ್ಯರಾಜ್ಯಗಳ ಪ್ರವಾಸದಲ್ಲಿದ್ದಾರೆ.

ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಸಂಪುಟದ ಎಲ್ಲಾ ಸಚಿವರೊಂದಿಗೆ ಉಪಾಹಾರ ಕೂಟ ನಡೆಸಿದ ಬಳಿಕ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದು, ಅದರಂತೆ ತಮ್ಮ ರಾಜೀನಾಮೆಯನ್ನು ಲೋಕ ಭವನಕ್ಕೆ ತಲುಪಿಸಿದ್ದಾರೆ.

ರಾಜ್ಯಪಾಲರ ಅನುಪಸ್ಥಿತಿಯಿಂದಾಗಿ ರಾಜೀನಾಮೆ ಅಂಗೀಕಾರಗೊಳ್ಳುವ ಬಗ್ಗೆ ಗೊಂದಲಗಳು ಏರ್ಪಟ್ಟಿವೆ. ಹೈಕಮಾಂಡ್‌ನ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರು ಹುದ್ದೆ ತ್ಯಾಗ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್‌ಗೆ ಪಟ್ಟ:
ಮುಂದಿನ ನಾಯಕತ್ವದ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಪ್ರಸ್ತುತ ಸನ್ನಿವೇಶದಲ್ಲಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಇದಕ್ಕಾಗಿ ಈಗಾಗಲೇ ವೇದಿಕೆಗಳು ಸಿದ್ಧಗೊಳ್ಳುತ್ತಿವೆ. ನಗರದ ಎಲ್ಲೆಡೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅಭಿನಂದನೆಗಳು ಎಂಬ ಪೋಸ್ಟರ್‌ಗಳು, ಬಂಟಿಂಗ್ಸ್ ಗಳು, ರಾರಾಜಿಸುತ್ತಿವೆ.

ನಿನ್ನೆಯಿಂದಲೇ ಡಿ.ಕೆ.ಶಿವಕುಮಾರ್‌ ಅವರ ತವರು ಕ್ಷೇತ್ರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆ ಮತ್ತು ಸದಾಶಿವನಗರದ ಅವರ ಮನೆಯ ಮುಂದೆ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಸಿದ್ದರಾಮಯ್ಯ ಪರೋಕ್ಷ ಸಂದೇಶ:
ಇಂದು ಉಪಾಹಾರ ಕೂಟದಲ್ಲಿ ಸಿದ್ದರಾಮಯ್ಯ ಅವರು ತಮ ಬಲಗಡೆ ಡಿ.ಕೆ.ಶಿವಕುಮಾರ್‌ ಅವರನ್ನು, ಎಡಗಡೆ ಗೃಹ ಸಚಿವ ಪರಮೇಶ್ವರ್‌ರವನ್ನು ಕೂರಿಸಿಕೊಳ್ಳುವ ಮೂಲಕ ನಾಯಕತ್ವ ನಿರ್ಧಾರ ಸುಲಭವಲ್ಲ ಎಂಬ ಮುನ್ಸೂಚನೆ ನೀಡಿದ್ದಾರೆ. ತಮ ನಂತರದಲ್ಲಿ ಪರಿಶಿಷ್ಟ ಜಾತಿಗೆ ಅವಕಾಶ ನೀಡಬೇಕೆಂದು ಡಿ.ಕೆ.ಶಿವಕುಮಾರ್‌ ಹೈಕಮಾಂಡ್‌ ಮುಂದೆ ಪ್ರತಿಪಾದನೆ ಮಾಡಿರುವುದಾಗಿ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ಎಚ್‌.ಕೆ.ಪಾಟೀಲ್‌, ಕೆ.ಜೆ.ಜಾರ್ಜ್‌, ಕೆ.ಎಚ್‌.ಮುನಿಯಪ್ಪ ಅವರಂತಹ ಹಿರಿಯರನ್ನು ಬದಿಗೆ ಕೂರಿಸಿ ಪರಮೇಶ್ವರ್‌ ಅವರನ್ನು ಪಕ್ಕದಲ್ಲೇ ಇರುವಂತೆ ಮುಖ್ಯಮಂತ್ರಿ ನೋಡಿಕೊಂಡಿರುವುದು ರಾಜಕೀಯವಾಗಿ ನಾನಾ ರೀತಿಯ ಸಂದೇಶ ರವಾನಗೆ ಕಾರಣವಾಗಿದೆ.

ಬೆಂಗಳೂರು, ಮೇ 28- ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಲೋಕಭವನ ಕಚೇರಿಗೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಅನ್ಯರಾಜ್ಯಗಳ ಪ್ರವಾಸದಲ್ಲಿದ್ದಾರೆ. ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಸಂಪುಟದ ಎಲ್ಲಾ ಸಚಿವರೊಂದಿಗೆ ಉಪಾಹಾರ ಕೂಟ ನಡೆಸಿದ ಬಳಿಕ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದು, ಅದರಂತೆ ತಮ್ಮ ರಾಜೀನಾಮೆಯನ್ನು ಲೋಕ ಭವನಕ್ಕೆ ತಲುಪಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: eesanje