
ನವದೆಹಲಿ,ಜ.24- ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮತ್ತೆ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ (ನಿನ್ನೆ) 14,849 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ಮಾಡಿದೆ.ಕಳೆದ ಒಂದು ವಾರದಲ್ಲಿ ಸೋಂಕಿತರು 15 ಸಾವಿರ ಆಸುಪಾಸಿನಲ್ಲಿ ವರದಿಯಾಗುತ್ತಿದೆ. ಕಳವಳ ಪಡುವ ಅಗತ್ಯವಿಲ್ಲ ಎಂದು ಅಕಾರಿಗಳು ತಿಳಿಸಿದ್ದಾರೆ.
ಶನಿವಾರ 155 ಜನ ಸಾವನ್ನಪ್ಪಿದ್ದಾರೆ. ಈವರೆಗೆ ಸತ್ತವರ ಸಂಖ್ಯೆ 1,53,339 ಆಗಿದೆ. ದೇಶದಲ್ಲಿ ಈವರೆಗೆ ಸೋಂಕಿನಿಂದ ಗುಣ ಹಂದಿರುವವರ ಸಂಖ್ಯೆ 1.03,16,786ಗೆ ತಲುಪಿದೆ.