Dailyhunt Logo
  • Light mode
    Follow system
    Dark mode
    • Play Story
    • App Story
ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರ ಸೆರೆ

ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರ ಸೆರೆ

ಈ ಸಂಜೆ 5 years ago

ಬೆಂಗಳೂರು, ಅ.29- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಆಗ್ನೇಯ ವಿಭಾಗದ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿ 5.5 ಲಕ್ಷ ಬೆಲೆ ಬಾಳುವ 18 ಕೆಜಿ ಗಾಂಜಾ ವಶಪಡಿಸಿಕೊಂಡಿ ದ್ದಾರೆ. ಅಭಿಜಿತ್ (25) ಮತ್ತು ರಶೀದ್ (40) ಬಂಧಿತರು.

ಎಸ್‍ಜಿ ಪಾಳ್ಯ ಪಾರ್ಕ್ ಮುಖ್ಯಗೇಟ್ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ಇಬ್ಬರನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿ ದ್ದಾರೆ.

ಮೋಜಿನ ಜೀವನಕ್ಕಾಗಿ ಹಣ ಹೊಂದಿಸಲು ತನ್ನ ಸಹಚರರೊಂದಿಗೆ ಸೇರಿ ಮಾದಕ ವಸ್ತು ಗಾಂಜಾವನ್ನು ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾಫ್ಟ್‍ವೇರ್ ಕಂಪನಿಗಳ ನೌಕರರಿಗೆ ಮಾರಾಟ ಮಾಡುತ್ತಿದ್ದುದು ವಿಚಾರಣೆ ಯಿಂದ ತಿಳಿದುಬಂದಿದೆ.

ಈ ಯಶಸ್ವಿ ಕಾರ್ಯಾಚರಣೆ ಯನ್ನು ನಗರಪೊಲೀಸ್ ಆಯುಕ್ತರು ಪ್ರಶಂಸಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: eesanje