ಹಾಸನಾಂಬೆ ದರ್ಶನ ಆರಂಭ, ನ.6ರವರೆಗೆ ಭಕ್ತರಿಗೆ ಷರತ್ತುಬದ್ದ ದರ್ಶನ ಭಾಗ್ಯ

ಹಾಸನಾಂಬೆ ದರ್ಶನ ಆರಂಭ, ನ.6ರವರೆಗೆ ಭಕ್ತರಿಗೆ ಷರತ್ತುಬದ್ದ ದರ್ಶನ ಭಾಗ್ಯ

ಈ ಸಂಜೆ

ಈ ಸಂಜೆ

1622d

Loading...

ಹಾಸನ,ಅ.28- ಸುಪ್ರಸಿದ್ಧ ಹಾಸನಾಂಬ ದೇವಿ ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದು, ವಿದ್ಯುಕ್ತವಾಗಿ ಧಾರ್ಮಿಕ ವಿ ವಿಧಾನಗಳೊಂದಿಗೆ ಆದಿಚುಂಚನಗಿರಿ ಮಠದ ಮಠಾೀಶರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು.

ಇಂದಿನಿಂದ ನ.6 ರವರೆಗೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಈ ಬಾರಿ 9 ದಿನಗಳ ಕಾಲ ಕೊರೊನಾ ನಿಯಮಾನುಸಾರ ಷರತ್ತುಬದ್ದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮೊದಲ ಹಾಗೂ ಕೊನೆಯ ದಿನ ಭಕ್ತರಿಗೆ ದೇವಿಯ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಶ್ವೀಜ ಮಾಸದ ಮೊದಲ ಗುರುವಾರ ಇಂದು ಮಧ್ಯಾಹ್ನ 12.16ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಹೊರ ಜಿಲ್ಲಾ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತಸಾಗರ ಹರಿದು ಬರಲಿದೆ.

ದೇವಾಲಯದ ಬಾಗಿಲು ಹಾಕುವಾಗ ಹಚ್ಚಿಟ್ಟ ದೀಪ ವರ್ಷ ಪೂರ್ತಿ ಬೆಳಗುತ್ತದೆ. ಮುಂದಿನ ವರ್ಷ ಬಾಗಿಲು ತೆರೆದಾಗ ದೀಪ ಬೆಳಗುತ್ತಲೇ ಇರುತ್ತದೆ. ದೇವರಿಗೆ ಇಟ್ಟ ನೈವೇದ್ಯ ಒಂದು ವರ್ಷದ ನಂತರವೂ ಉತ್ತಮವಾಗಿರುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ದೇವಿಯ ಪವಾಡ ನೋಡಲು ಪ್ರತಿವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸಲಿದ್ದು, ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು ದೇವಿಯ ದರ್ಶನ ವನ್ನು ಪಡೆಯಲು ಆಗಮಿಸುತ್ತಾರೆ.

ಸಚಿವರಾದ ಕೆ.ಗೋಪಾಲಯ್ಯ, ಮಾಧುಸ್ವಾಮಿ, ಶಾಸಕ ಪ್ರೀತಂ ಜೇ ಗೌಡ, ಜಿಲ್ಲಾಧಿಕಾರಿ ಆರ್. ಗಿರೀಶ್, ಹಾಸನಾಂಬ ದೇವಸ್ಥಾನ ಆಡಳಿತಾಕಾರಿ ಬಿ.ಎ.ಜಗದೀಶ್, ಎಎಸ್ಪಿ ನಂದಿನಿ, ಜಿಪಂ ಸಿಇಒ ಬಿ.ಎ.ಪರಮೇಶ್, ಅಪರ ಜಿಲ್ಲಾಕಾರಿ ಕವಿತಾ ರಾಜಾರಾಂ, ಬಿಬಿಎಂಪಿ ಮಾಜಿ ಉಪ ಮೇಯರ್ ಹೇಮಲತಾ ಗೋಪಾಲಯ್ಯ ಸೇರಿದಂತೆ ಇತರೆ ಅಕಾರಿಗಳು, ಜನಪ್ರತಿನಿಗಳ ಸಮ್ಮುಖದಲ್ಲಿ ದೇಗುಲದ ಗರ್ಭಗುಡಿ ಬಾಗಿಲ ಬೀಗ ಮುದ್ರೆ ತೆರೆಯಲಾಯಿತು.

ಬೆಳಿಗ್ಗೆ ದೇಗುಲದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಸಂಪ್ರದಾಯದಂತೆ ತಳವಾರ ವಂಶದ ನರಸಿಂಹರಾಜ್ ಅರಸ್ ಅವರು ಬಾಳೆ ಕಂದು ಕಡಿಯುವ ಮೂಲಕ ಬಾಗಿಲು ತೆರೆಯಲು ಅನುವು ಮಾಡಿಕೊಟ್ಟರು. ಹಾಸನಾಂಬ, ಸಿದ್ದೇಶ್ವರ ಜÁತ್ರಾ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು.

ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಹಾಗೂ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕಾಗಿ 300 ಹಾಗೂ 1000 ರೂ. ಗಳ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ.

ಕಡ್ಡಾಯ: ಕೊರೊನಾ ಕಾರಣ ಎರಡು ಲಸಿಕೆ ಪಡೆದವರಿಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ವ್ಯಾಕ್ಸಿನ್ ಹಾಕಿಸಿಕೊಂಡ ಸರ್ಟಿಫಿಕೇಟ್ ಅಥವಾ ಮೆಸೇಜ್ ನೊಂದಿಗೆ ಆಧಾರ್ ಕಾರ್ಡ್ , ಚುನಾವಣೆ ಗುರುತಿನ ಚೀಟಿ ಹೊಂದಿರಬೇಕು.

Your Reaction?

23
20
3
Dailyhunt
Disclaimer: This content has not been generated, created or edited by Dailyhunt. Publisher: eesanje