Anti-Hindu Congress : R Ashok
ಬೆಂಗಳೂರು,ಏ.8- ಹಿಂದೂ ವಿರೋಧಿ ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬುತ್ತಿದೆ. ಹಿಂದೂಗಳ ಸಹನೆಯ ಕಟ್ಟೆ ಒಡೆಯುತ್ತಿದೆ. ಕರ್ನಾಟಕದಿಂದ ಕಾಂಗ್ರೆಸ್ ಪಕ್ಷವನ್ನು ಓಡಿಸುವ ದಿನ ಬಹಳ ದೂರವಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಸಿದ್ದಾರೆ.
ಎಕ್ಸ್ ನಲ್ಲಿ ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಹಿಂದೂಗಳ ವಿರುದ್ಧ ಪ್ರಚೋದನೆ ಮಾಡುವ ಭಾಷಣಗಳಿಗೆ ದ್ವೇಷ ಭಾಷಣ ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆಯೇ? ನಕಲಿ ಗಾಂಧಿಗಳಿಗೆ, ನಕಲಿ ಗಾಂಧಿಗಳ ಗುಲಾಮರಿಗೆ ದ್ವೇಷ ಭಾಷಣ ಕಾಯ್ದೆ ಅನ್ವಯವೇ ಆಗುವುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಮತ್ತೊಂದು ಪೋಸ್ಟ್ ನಲ್ಲಿ ಗ್ಲೋಬಲ್ ಸಿಟಿ ಎಂದು ಕರೆಸಿಕೊಳ್ಳುತ್ತಿದ್ದ ನಮೆಲ್ಲರ ಹೆಮೆಯ ಬೆಂಗಳೂರು, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ `ಗಾರ್ಬೇಜ್ ಸಿಟಿ' ಎಂದು ಮಾಧ್ಯಮಗಳಲ್ಲಿ ಅಪಹಾಸ್ಯಕ್ಕೀಡಾಗುತ್ತಿದೆ.
ಬೆಂಗಳೂರಿನಲ್ಲಿ ಜನ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವಂತೆ ಮಾಡಿದ್ದೇ ನಿಮ ಬ್ರ್ಯಾಂಡ್ ಬೆಂಗಳೂರಿನ ಸಾಕ್ಷಿ ಗುಡ್ಡೆ ಅಲ್ಲವೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ? ಕರ್ನಾಟಕದಿಂದ ಓಡಿಸುವ ದಿನ ಬಹಳ ದೂರವಿಲ್ಲ ಎಂದು ಅಶೋಕ್ ಎಚ್ಚರಿಕೆ ಕೊಟ್ಟಿದ್ದಾರೆ.