Dailyhunt
ಇಂದಿನಿಂದ ಪದವಿ ಕಾಲೇಜು ಆರಂಭ  ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ

ಇಂದಿನಿಂದ ಪದವಿ ಕಾಲೇಜು ಆರಂಭ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ

ಈ ಸಂಜೆ 4 years ago

ಬೆಂಗಳೂರು, ಜು.25- ಕೋವಿಡ್ 2ನೇ ಅಲೆಯಿಂದಾಗಿ ಸ್ಥಗಿತಗೊಂಡಿದ್ದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿವೆ.
2ನೇ ಅಲೆಯ ಆರ್ಭಟದಲ್ಲಿ ಮನೆಯಲ್ಲೇ ಉಳಿದಿದ್ದ ವಿದ್ಯಾರ್ಥಿಗಳು ಇಂದು ಕಾಲೇಜುಗಳಿಗೆ ತೆರಳಿದರು. ಕಾಲೇಜುಗಳು ಪ್ರಾರಂಭವಾಗುತ್ತವೋ ಇಲ್ಲವೋ ಎಂಬ ಜಿಜ್ಞಾಸೆಯಲ್ಲಿದ್ದ ವಿದ್ಯಾರ್ಥಿಗಳು ಇಂದು ಸಂತಸದಿಂದಲೇ ಕಾಲೇಜುಗಳಿಗೆ ಬಂದರು.

ಕೊರೊನಾ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಸಾಕಷ್ಟು ನಿಯಮಗಳನ್ನು ರೂಪಿಸಲಾಗಿತ್ತು. ಯಾವುದೇ ಕಾರಣಕ್ಕೂ ನಿಯಮ ಮೀರದಂತೆ ಎಚ್ಚರಿಕೆ ವಹಿಸಲಾಗಿತ್ತು.
ಲಸಿಕೆ ಪಡೆದ ವಿದ್ಯಾರ್ಥಿಗಳಷ್ಟೇ ಕಾಲೇಜಿಗೆ ಬರಬೇಕೆಂದು ಕಡ್ಡಾಯ ಮಾಡಿರುವ ಹಿನ್ನೆಲೆಯಲ್ಲಿ ಕಾಲೇಜಿನ ಗೇಟ್ ಬಳಿಯೇ ಪ್ರಮಾಣಪತ್ರ ಪರಿಶೀಲಿಸಿ ಒಳಬಿಡಲಾಗುತ್ತಿತ್ತು.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಕನಿಷ್ಠ ಒಂದು ಡೋಸ್ ಲಸಿಕೆಯನ್ನಾದರೂ ವಿದ್ಯಾರ್ಥಿಗಳು ಪಡೆದಿರಬೇಕು. ಇನ್ನು ಹೊರರಾಜ್ಯದಿಂದ ಬರುವ ಕೊರೊನಾ ಆರ್‍ಟಿಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಕಾಲೇಜಿಗೆ ಬರುವ 72 ಗಂಟೆಗಳ ಮುಂಚೆ ಕೊರೊನಾ ಟೆಸ್ಟ್ ಮಾಡಿಸಿರುವ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಅಂತಹ ಪ್ರಮಾಣಪತ್ರ ಇರುರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿತ್ತು.

ಭೌತಿಕ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಎಲ್ಲ ವಿವಿಗಳ ವ್ಯಾಪ್ತಿಗಳಲ್ಲೂ ಲಸಿಕೀಕರಣ ವೇಗವಾಗಿ ನಡೆಯುತ್ತಿದ್ದು, ಈವರೆಗೆ ಶೇ. 74 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಉಳಿದ ಎಲ್ಲ ವಿದ್ಯಾರ್ಥಿಗಳಿಗೂ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.

ಕೋವಿಡ್ ನಿಯಮಾವಳಿ ಪಾಲನೆಗೆ ಈಗಾಗಲೇ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಸ್ಪಷ್ಟ ಮಾರ್ಗಸೂಚಿ ಜಾರಿ ಮಾಡಿದ್ದು, ಅದನ್ನು ಎಲ್ಲ ವಿಶ್ವವಿದ್ಯಾಲಯಗಳಡಿಯ ಕಾಲೇಜುಗಳು ಚಾಚೂತಪ್ಪದೇ ಪಾಲಿಸಬೇಕು. ಈ ಬಗ್ಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

ಕೋವಿಡ್ ಮಾರ್ಗಸೂಚಿಯ ಪ್ರಾಥಮಿಕ ಶಿಷ್ಠಾಚಾರದಂತೆ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯವಾಗಿ ಮಾಡಲೇಬೇಕು. ನಿತ್ಯವೂ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ಅಲ್ಲದೆ, ವಿದ್ಯಾರ್ಥಿಗಳ ಲಸೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದು, ಆದಷ್ಟು ಬೇಗ ಎಲ್ಲರಿಗೂ ಲಸಿಕೆ ಸಿಗುವಂತೆ ಕ್ರಮ ವಹಿಸಬೇಕು ಎಂದು ಎಲ್ಲಾ ಕುಲಪತಿಗಳಿಗೆ ಸೂಚನೆ ಕೊಡಲಾಗಿದೆ ಎಂದು ಹೇಳಿದರು.

ನೇರ ತರಗತಿಗಳಿಗೆ ಹಾಜರಾಗುವ ಆಯ್ಕೆ ವಿದ್ಯಾರ್ಥಿಗಳಿಗೇ ಬಿಡಲಾಗಿದೆ. ಅವರು ಇಚ್ಛೆ ಇದ್ದರೆ ಭೌತಿಕ ತರಗತಿಗಳಿಗೆ ಹಾಜರಾಗಬಹುದು, ಇಲ್ಲವೇ ಆನ್‍ಲೈನ್ ಮೂಲಕವೂ ಕಲಿಯಬಹುದು. ಆದರೆ, ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ತಿಳಿಸಿದರು. ಕೆಲ ವಿಶ್ವವಿದ್ಯಾಲಯಗಳಲ್ಲಿ ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೀಕರಣ ನಡೆದಿದೆ. ಇನ್ನೂ ಕೆಲ ವಿವಿಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಈ ಬಗ್ಗೆ ಕ್ರಮ ವಹಿಸಲು ಆಯಾ ವಿವಿಗಳ ಕುಲಪತಿಗಳಿಗೆ ತಿಳಿಸಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: eesanje