ಬೆಂಗಳೂರು,ಏ.22- ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಸ್ರ್ಪಸಿದ್ದ ಮೊಹಮ್ಮದ್ ನಲಪಾಡ್ ವಿರುದ್ಧ ಉಪಾಧ್ಯಕ್ಷೆ ಭವ್ಯಾ ಪೊಲೀಸರಿಗೆ ದೂರು ನೀಡಿದ್ದಾರೆ. ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕೋವಿಡ್ ವಾರ್ ರೂಮ್ ಸ್ಥಾಪಿಸುವ ಸಂಬಂಧಪಟ್ಟಂತೆ ಕೆಲಸ ನಿರ್ವಹಿಸುತ್ತಿದ್ದಾಗ ಮೊಹಮ್ಮದ್ ನಲಪಾಡ್ ಮತ್ತವರ ಬೆಂಬಲಿಗರು ಬಂದು ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಯುವ ಕಾಂಗ್ರೆಸ್‍ನ ಉಪಾಧ್ಯಕ್ಷೆ ಭವ್ಯಾ ಕಬ್ಬನ್‍ಪಾರ್ಕ್ vಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ರ್ಪಸಿ ಅತ್ಯಕ ಮತಗಳನ್ನು ಗಳಿಸಿದ್ದರು. ಆದರೆ, ಅವರ ಮೇಲೆ ಯುಬಿ ಸಿಟಿ ಹೋಟೆಲ್‍ವೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಕ್ರಿಮಿನಲ್ ಮೊಕದ್ದಮೆ ಇರುವುದರಿಂದ ಅಧ್ಯಕ್ಷ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ರಕ್ಷಾ ರಾಮಯ್ಯ ಅವರನ್ನು ಯುವ ಕಾಂಗ್ರೆಸ್ ಅಧ್ಯಕ್ಷರೆಂದು ಘೋಷಿಸಲಾಗಿದೆ. ಈ ನಡುವೆ ಮೊಹಮ್ಮದ್ ನಲಪಾಡ್ ಚಟುವಟಿಕೆ ನಿರತರಾಗಿರುವುದರಿಂದ ಗೊಂದಲಗಳು ಉಂಟಾಗುತ್ತಿವೆ.
ಕೋವಿಡ್ ನಿಯಂತ್ರಣಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ದೆಹಲಿಯಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಪಕ್ಷದ ವತಿಯಿಂದ ಕೋವಿಡ್ ನಿಯಂತ್ರಣಕ್ಕಾಗಿ ವಾರ್‍ರೂಮ್ ಸ್ಥಾಪಿಸಲಾಗುತ್ತಿರುವ ಸಂದರ್ಭದಲ್ಲಿ ಗಲಾಟೆಯಾಗಿದೆ.

