Dailyhunt Logo
  • Light mode
    Follow system
    Dark mode
    • Play Story
    • App Story
ಕನ್ನಡಿಗರ ಉದ್ಯೋಗವಕಾಶಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ : ಸಿಎಂ ಡಿಕೆಶಿ

ಕನ್ನಡಿಗರ ಉದ್ಯೋಗವಕಾಶಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ : ಸಿಎಂ ಡಿಕೆಶಿ

ಬೆಂಗಳೂರು, ಅ.25- ಕರ್ನಾಟಕದಲ್ಲಿ ಕನ್ನಡಿಗರ ಹಕ್ಕು, ಗೌರವ ಮತ್ತು ಉದ್ಯೋಗಾವಕಾಶ ಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ ಕನ್ನಡ ಮಾತೃ ಭಾಷೆ ಹೊಂದಿರುವ ವರನ್ನು ಉದ್ಯೋಗಾವಕಾಶಗಳಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪ ವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ಗುರುತಿಸುತ್ತಿದ್ದು, ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ಸರ್ಕಾರಕ್ಕೆ ಅಪಾರ ಹೆಮ್ಮೆಯಿದೆ. ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ವಂಚಿಸುತ್ತಿರುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕನ್ನಡಿಗರ ಹಿತಾಸಕ್ತಿಯನ್ನು ಕಾಪಾಡಲು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಹಿನ್ನೆಲೆ:
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಯುವತಿಯೊಬ್ಬರ ವಿಡಿಯೊದಲ್ಲಿ, ಬೆಂಗಳೂರಿನ ಕೆಲವು ಮಾಹಿತಿ ತಂತ್ರಜ್ಞಾನ ಕಂಪನಿಗಳು ಕನ್ನಡವನ್ನು ಮಾತೃಭಾಷೆಯೆಂದು ನಮೂದಿಸುವ ಅಭ್ಯರ್ಥಿಗಳಿಗೆ ಉದ್ಯೋಗ ನೀಡುತ್ತಿಲ್ಲ ಎಂದು ಆರೋಪಿಸಲಾಗಿದೆ. ತಮಿಳು ಮತ್ತು ತೆಲುಗು ಭಾಷೆ ಬಲ್ಲ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಹಾಗೂ ಬೆಂಗಳೂರಿನ ಕಾಲೇಜುಗಳಲ್ಲಿ ಉದ್ಯೋಗ ಆಯ್ಕೆ ಸಂದರ್ಶನಗಳನ್ನು ನಡೆಸದೆ ಹೊರರಾಜ್ಯಗಳಿಂದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂಬುದು ಯುವತಿಯ ಪ್ರಮುಖ ಆರೋಪವಾಗಿದೆ.ಬೆಂಗಳೂರಿನ ಇಂದಿರಾನಗರದಲ್ಲಿರುವ ಇ-ಸ್ಟೆನೋಸ್‌‍ ಟೆಕ್ನಾಲಜೀಸ್‌‍ ಸಂಸ್ಥೆಯಲ್ಲಿಯೂ ಕನ್ನಡಕ್ಕೆ ಅಗೌರವ ತೋರಲಾಗಿದೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಸಮಾನ ಅವಕಾಶಗಳ ದೃಷ್ಟಿಯಿಂದ ಪರಿಶೀಲಿಸುವ ಅಗತ್ಯವಿದೆ. ಕನ್ನಡ ಮಾಧ್ಯಮದಲ್ಲಿ ಕಲಿತ ಅಭ್ಯರ್ಥಿಗಳು ತಾಂತ್ರಿಕ ಜ್ಞಾನ, ವೃತ್ತಿಪರ ಕೌಶಲ್ಯ ಮತ್ತು ಸ್ಪರ್ಧಾತಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಸಾಮರ್ಥ್ಯ ಹೊಂದಿದ್ದರೂ, ಇಂಗ್ಲಿಷ್‌ ಸಂವಹನ ಕೌಶಲ್ಯದ ಕೊರತೆ ಅಥವಾ ನೇಮಕಾತಿಯಲ್ಲಿನ ಭಾಷಾ ಆದ್ಯತೆಗಳಿಂದ ಅವಕಾಶ ಕಳೆದುಕೊಳ್ಳುತ್ತಿದ್ದಾರೆ ಎಂಬ ಆತಂಕ ಇದೆ.

2024ರಲ್ಲಿ ರಾಜ್ಯ ಸರ್ಕಾರ ಖಾಸಗಿ ವಲಯದ ನಿರ್ದಿಷ್ಟ ಹುದ್ದೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಸಚಿವ ಸಂಪುಟದಲ್ಲಿ ಅನುಮೋದಿಸಿತ್ತು. ನಿರ್ವಹಣಾ ಹುದ್ದೆಗಳಲ್ಲಿ ಶೇ. 50 ಮತ್ತು ಇತರ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಪ್ರಸ್ತಾವನೆ ಚರ್ಚೆಯಾಗಿತ್ತು. ಆದರೆ ಉದ್ಯಮ ವಲಯದ ಆಕ್ಷೇಪಗಳ ಹಿನ್ನೆಲೆಯಲ್ಲಿ ವಿಧೇಯಕವನ್ನು ಮತ್ತಷ್ಟು ಪರಿಶೀಲನೆಗಾಗಿ ತಡೆ ಹಿಡಿಯಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ ಕನ್ನಡ ಮಾತೃ ಭಾಷೆ ಹೊಂದಿರುವ ವರನ್ನು ಉದ್ಯೋಗಾವಕಾಶಗಳಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪ ವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: eesanje