Dailyhunt
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಕೋವಿಡ್ ಮೊಬೈಲ್ ಟೆಸ್ಟ್ ಲ್ಯಾಬ್

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಕೋವಿಡ್ ಮೊಬೈಲ್ ಟೆಸ್ಟ್ ಲ್ಯಾಬ್

ಈ ಸಂಜೆ 4 years ago

ಬೆಂಗಳೂರು,ಜು.3- ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ರೂಪಾಂತರವಾಗಿರುವ ಡೆಲ್ಟಾ ಪ್ಲಸ್ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಮೊಬೈಲ್ ಟೆಸ್ಟ್ ಲ್ಯಾಬ್ ತೆರೆಯಲಾಗಿದೆ. ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೆ ಕಡ್ಡಾಯ ತಪಾಸಣೆ ಮಾಡಲಾಗುತ್ತಿದೆ.

ಇದಕ್ಕಾಗಿ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಮೊಬೈಲ್ ಟೆಸ್ಟ್ ಲ್ಯಾಬ್‍ಗಳನ್ನು ಸ್ಥಾಪಿಸಲಾಗಿದೆ. ಆ ರಾಜ್ಯದಿಂದ ಬರುವ ಪ್ರಯಾಣಿಕರು 72 ಗಂಟೆ ಅವಧಿಯೊಳಗೆ ಮಾಡಿಸಲಾಗಿರುವ ಟೆಸ್ಟ್‍ನ ಕೊರೊನಾ ನೆಗೆಟಿವ್ ವರದಿ ಹೊಂದಿರಬೇಕು.

ಪ್ರಯಾಣಿಕರು ಒಂದು ಡೋಸ್ ಆದರೂ ಕೋವಿಡ್ ಲಸಿಕೆ ತೆಗೆದುಕೊಂಡಿರಬೇಕು.

ಎರಡು ವರ್ಷದೊಳಗಿನ ಮಕ್ಕಳಿಗೆ ವರದಿಯಿಂದ ವಿನಾಯಿತಿ ನೀಡಲಾಗಿದೆ. ಸಂಬಂಧಿಕರ ಸಾವು, ಮೆಡಿಕಲ್ ಎಮರ್ಜೆನ್ಸಿ ಸಮಯದಲ್ಲಿ ಮಾತ್ರ ಪ್ರಯಾಣಿಕರ ಸ್ವ್ಯಾಬ್ ಟೆಸ್ಟ್ ಪಡೆದು ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: eesanje