ಬೆಂಗಳೂರು,ಸೆ.7- ಎರಡು ಪ್ರತ್ಯೇಕ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ 6.3 ಲಕ್ಷ ರೂ. ನಗದು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಸ್ಥಳದ ಮೇಲೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು 6.3 ಲಕ್ಷ ರೂ. ನಗದು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಆರ್.ಆರ್.ನಗರ ಮತ್ತು ವೈಯಾಲಿಕಾವಲ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಇಂಗ್ಲೆಂಡ್‍ನ ಓವೆಲ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿದ್ದ 4ನೇ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿ ವೇಳೆ ಈ ಇಬ್ಬರು ಆರೋಪಿಗಳು ನಗರದಲ್ಲಿ ಮೊಬೈಲ್ ಫೋನ್‍ಗಳ ಮುಖಾಂತರ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ವೇಳೆ ಸಿಸಿಬಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
ಅಪರಾಧ ವಿಭಾಗದ ಡಿಸಿಪಿ ಕೆ.ಪಿ.ರವಿಕುಮಾರ್ ಅವರ ಮಾರ್ಗದರ್ಶನದಲ್ಲಿ ಎಸಿಪಿ ಹನುಮಂತರಾಯ, ಇನ್ಸ್‍ಪೆಕ್ಟರ್‍ಗಳಾದ ರವಿಪಾಟೀಲ್ ಮತ್ತು ರಹೀಮ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

