ಮುಖ್ಯಾಂಶಗಳು
ಪಾಲಿಕೆ ಚುನಾವಣೆಗಳ ಫಲಿತಾಂಶ ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿ : ಸಿಎಂ
ಬೆಂಗಳೂರು, ಸೆ.6- ಮಹಾನಗರ ಪಾಲಿಕೆ ಚುನಾವಣೆಗಳ ಫಲಿತಾಂಶ ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಹಾಗೂ ಜನತೆ ಬಿಜೆಪಿಯ ಮೇಲೆ ಇಟ್ಟಿರುವ ಒಲವಿಗೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮೊದಲ ಬಾರಿಗೆ ಪಕ್ಷದ ಚಿಹ್ನೆಯಡಿ ಅದ್ಭುತ ಗೆಲವು ಸಾಧಿಸಿದೆ. ಬೆಳಗಾವಿ , ಹುಬ್ಬಳ್ಳಿ ಸೇರಿದಂತೆ ಎಲ್ಲಾ ಕಡೆ ನಾವು ಗೆಲುವು ಸಾಧಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಬಲ ಯಡಿಯೂರಪ್ಪನವರ ಆಶೀರ್ವಾದ ನಮ್ಮ ಮೇಲಿದೆ ಎಂದು ಹೇಳಿದರು.
ಬೆಳಗಾವಿ ಬಿಜೆಪಿಯ ಭದ್ರಕೋಟೆ. ಈಗ ಅದು ಮತ್ತೆ ಫಲಿತಾಂಶದ ಮೂಲಕ ಮರು ಕಳಿಸಿದೆ. ಕಲ್ಬುರ್ಗಿಯಲ್ಲೂ ಉತ್ತಮ ಸಾಧನೆ ಮಾಡಿದ್ದೇವೆ. ಎಲ್ಲಾ ಫಲಿತಾಂಶಗಳನ್ನು ಗಮನಿಸಿದರೆ ಜನತೆ ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟಿದ್ದಾರೆ ಎಂಬುದು ಖಚಿತವಾಗಿದೆ ಎಂದು ಅವರು ಹೇಳಿದರು.
Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: eesanje