Dailyhunt
ರಾಜ್ಯದಲ್ಲಿಂದು 44631 ಮಂದಿಗೆ ಕೊರೋನಾ ಪಾಸಿಟಿವ್, 292 ಸಾವು..!

ರಾಜ್ಯದಲ್ಲಿಂದು 44631 ಮಂದಿಗೆ ಕೊರೋನಾ ಪಾಸಿಟಿವ್, 292 ಸಾವು..!

ಈ ಸಂಜೆ 4 years ago

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಇಂದು 44631 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 292 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1690934 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 16538ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 20870 ಜನರಿಗೆ ಕೊರೋನಾ ತಗುಲಿದ್ದು, 132 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 840274 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 6845 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 24714 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1210013 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: eesanje