ಬೆಂಗಳೂರು,ಅ.24- ವಿಜಯದಶಮಿ ನಿಮಿತ್ತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘದ (ಆರ್‌ಎಸ್‌ಎಸ್) ವತಿಯಿಂದ ಪಥಸಂಚಲನ ಹಮಿಕೊಳ್ಳಲಾಗಿದೆ. ಪಥಸಂಚಲನ ನಡೆಯುವ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಇಂದು ಮೈಸೂರು, ಕೋಲಾರ, ಧಾರವಾಡ, ವಿಜಯಪುರ, ಬೆಳಗಾವಿ, ನಾಳೆ ಕಲಬುರಗಿ, ರಾಮನಗರ, ಹುಬ್ಬಳ್ಳಿ ಮುಂತಾದ ಜಿಲ್ಲೆಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಯಲಿದೆ.
ಕೆಲವು ಕಡೆ ಷರತ್ತುಬದ್ಧ ಅನುಮತಿ ಸಿಕ್ಕಿದ್ದು, ಇನ್ನೂ ಕೆಲವು ಕಡೆ ಪಥಸಂಚಲನದ ಅನುಮತಿಗೆ ಸಿದ್ಧತೆ ನಡೆಯುತ್ತಿದೆ.
ಪಥಸಂಚಲನ ನಡೆಯುವ ಎಲ್ಲಾ ಸ್ಥಳಗಳಲ್ಲೂ ಬಿಗಿ ಪೊಲೀಸ್ ಬಂದೊಬಸ್ತ್ ಮಾಡಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್.ಹಿತೇಂದ್ರ ತಿಳಿಸಿದ್ದಾರೆ.
ಈ ಸಂಜೆಯೊಂದಿಗೆ ಮಾತನಾಡಿದ ಅವರು, ಪಥಸಂಚಲನದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು. ಅನುಮತಿ ಕೇಳಿದ ಕಡೆ ಪಥಸಂಚಲನಕ್ಕೆ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದರು.