Tuesday, 07 Sep, 11.19 am ಈ ಸಂಜೆ

ಮುಖ್ಯಾಂಶಗಳು
ಸಚಿವ ನಿರಾಣಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್‍ ಖಾತೆ

ಬೆಂಗಳೂರು,ಸೆ.7- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಮುರುಗೇಶ್ ನಿರಾಣಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಕೆಲವು ಕಿಡಿಗೇಡಿಗಳು ಫೇಸ್‍ಬುಕ್‍ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸುತ್ತಿರುವುದು ಗಮನಕ್ಕೆ ಬಂದಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಯಾರೂ ನಂಬಿ ವಂಚನೆಗೆ ಒಳಗಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂಗೆ ದೂರು ನೀಡುತ್ತೇನೆ ಎಂದು ಕೂಡ ಸಚಿವರು ಹೇಳಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: eesanje
Top