Dailyhunt
ಶಿಕ್ಷಣ ಕ್ಷೇತ್ರದ ಬಲವರ್ಧನೆ ಅವಶ್ಯಕ : ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಶಿಕ್ಷಣ ಕ್ಷೇತ್ರದ ಬಲವರ್ಧನೆ ಅವಶ್ಯಕ : ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಈ ಸಂಜೆ 4 years ago

ನವದೆಹಲಿ,ಜು.29-ಶಿಕ್ಷಣ ಕ್ಷೇತ್ರದ ಘನತೆ ಗೌರವ ಹೆಚ್ಚಿಸುವುದರ ಜತೆಗೆ ಆ ಕ್ಷೇತ್ರವನ್ನು ಸಮಗ್ರವಾಗಿ ಹಾಗೂ ನ್ಯಾಯಸಮ್ಮತವಾಗಿ ಬಲವರ್ಧನೆಗೊಳಿಸುವ ಅವಶ್ಯಕತೆ ಇದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪುನರುಚ್ಚರಿಸಿದ್ದಾರೆ. ದೇಶದಲ್ಲಿ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಂದು ವರ್ಷ ಪೂರ್ಣಗೊಂಡಿರುವ ಸಂದರ್ಭದಲ್ಲಿ ಟ್ವಿಟ್ ಮಾಡಿರುವ ಅವರು, ಹೊಸ ನೀತಿ ಆತ್ಮನಿರ್ಭರ ಭಾರತ ಹಾಗೂ ಮೇಕ್ ಇನ್ ಇಂಡಿಯಾದ ಮೂಲಕ ಹೊಸ ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರುವ ಪ್ರತಿಭೆಯನ್ನು ಹೊರ ತರಬೇಕು ಎಂಬ ಉದ್ದೇಶದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದರು ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲಿ 1986 ರಲ್ಲಿ ರೂಪಿಸಲಾಗಿದ್ದ ಶಿಕ್ಷಣ ನೀತಿಗೆ ಬದಲಾಗಿ ಹೊಸ ಶಿಕ್ಷಣ ಪದ್ಧತಿ ಜಾರಿಗೆ ತರಲಾಗಿದೆ. ಇದು ಶಾಲೆ ಮತ್ತು ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಸಹಕಾರಿಯಾಗುತ್ತಿದೆ. ಮೇಕ್ ಇನ್ ಇಂಡಿಯಾ ಮೂಲಕ ವಿಶ್ವ ಜ್ಞಾನದಲ್ಲಿ ಸೂಪರ್ ಪವರ್ ರಾಷ್ಟ್ರವಾಗಿ ಹೊರ ಹೊಮ್ಮುತ್ತಿದ್ದೇವೆ ಎಂದು ಅವರು ಬಣ್ಣಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: eesanje