Dailyhunt Logo
  • Light mode
    Follow system
    Dark mode
    • Play Story
    • App Story
ಸಿಂಗಪೂರ್‌ ಪ್ರವಾಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್‌..!

ಸಿಂಗಪೂರ್‌ ಪ್ರವಾಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್‌..!

ಈ ಸಂಜೆ 3 weeks ago

Shock for couple who returned home after Singapore trip..!

ಮೈಸೂರು, ಮೇ 28- ಸಿಂಗಪೂರ್‌ ಪ್ರವಾಸ ಮುಗಿಸಿ ಮನೆಗೆ ಹಿಂದಿರುಗಿದ ದಂಪತಿಗೆ ಕಳ್ಳರು ಶಾಕ್‌ ನೀಡಿದ್ದಾರೆ. ಮನೆಯ ಬಾಗಿಲು ಮೀಟಿ ಒಳನುಗ್ಗಿದ ದುಷ್ಕರ್ಮಿಗಳು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ 500 ಅಮೆರಿಕನ್‌ ಡಾಲರ್‌ ದೋಚಿ ಪರಾರಿಯಾಗಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿ ವಿಶ್ವನಾಥ್‌ ರವೀಂದ್ರನ್‌ ಎಂಬುವವರ ಮನೆಯಲ್ಲಿ ಈ ಕಳವು ನಡೆದಿದೆ.

ಮೇ 21 ರಂದು ಸಿಂಗಪೂರ್‌ ಪ್ರವಾಸಕ್ಕೆ ತೆರಳಿದ್ದ ದಂಪತಿ ಮೇ 25 ರಂದು ಮೈಸೂರಿಗೆ ಹಿಂದಿರುಗಿದ್ದಾರೆ. ಮನೆಗೆ ಬಂದಾಗ ಮುಖ್ಯದ್ವಾರದ ಬಾಗಿಲು ಮೀಟಿ ತೆರೆದಿರುವುದು ಕಂಡುಬಂದಿದೆ.

ಒಳ ಪ್ರವೇಶಿಸಿದಾಗ ಮನೆಯಲ್ಲಿನ ಬಟ್ಟೆ- ಬರೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ತಕ್ಷಣ ಪರಿಶೀಲಿಸಿದಾಗ 5 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ, 2 ಲಕ್ಷ ರೂ. ಮೌಲ್ಯದ 3 ಕೆಜಿ ಬೆಳ್ಳಿ ಪದಾರ್ಥಗಳು ಹಾಗೂ 500 ಅಮೆರಿಕನ್‌ ಡಾಲರ್‌ ನಗದು ಕಳುವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ವಿಶ್ವನಾಥ್‌ ರವೀಂದ್ರನ್‌ ವಿಜಯನಗರ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದಿಂದ ಸಾಕ್ಷ್ಯ ಸಂಗ್ರಹಿಸಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಮೈಸೂರು, ಮೇ 28- ಸಿಂಗಪೂರ್‌ ಪ್ರವಾಸ ಮುಗಿಸಿ ಮನೆಗೆ ಹಿಂದಿರುಗಿದ ದಂಪತಿಗೆ ಕಳ್ಳರು ಶಾಕ್‌ ನೀಡಿದ್ದಾರೆ. ಮನೆಯ ಬಾಗಿಲು ಮೀಟಿ ಒಳನುಗ್ಗಿದ ದುಷ್ಕರ್ಮಿಗಳು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ 500 ಅಮೆರಿಕನ್‌ ಡಾಲರ್‌ ದೋಚಿ ಪರಾರಿಯಾಗಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿ ವಿಶ್ವನಾಥ್‌ ರವೀಂದ್ರನ್‌ ಎಂಬುವವರ ಮನೆಯಲ್ಲಿ ಈ ಕಳವು ನಡೆದಿದೆ.

Dailyhunt
Disclaimer: This content has not been generated, created or edited by Dailyhunt. Publisher: eesanje