Dailyhunt Logo
  • Light mode
    Follow system
    Dark mode
    • Play Story
    • App Story
ಸೌಜನ್ಯ ಕೊಲೆ ಪ್ರಕರಣ : ತಾಯಿಯಿಂದ ಡಿಎನ್‌ಎ ಮಾದರಿ ಸಂಗ್ರಹ

ಸೌಜನ್ಯ ಕೊಲೆ ಪ್ರಕರಣ : ತಾಯಿಯಿಂದ ಡಿಎನ್‌ಎ ಮಾದರಿ ಸಂಗ್ರಹ

ಬೆಳ್ತಂಗಡಿ,ಅ.24- ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯ ಭಾಗವಾಗಿ ವಿಶೇಷ ತನಿಖಾ ತಂಡದ (ಎಸ್‌‍ಐಟಿ) ಅಧಿಕಾರಿಗಳು ಸೌಜನ್ಯ ಅವರ ತಾಯಿ ಕುಸುಮಾವತಿಯವರ ರಕ್ತದ ಮಾದರಿಯನ್ನು ಸಂಗ್ರಹಿಸಿದ್ದಾರೆ.

ನಿನ್ನೆ ಸಂಜೆ 4.30ರಿಂದ 6 ಗಂಟೆಯವರೆಗೆ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಈ ಪ್ರಕ್ರಿಯೆ ನಡೆಯಿತು.

ಎಸ್‌‍ಐಟಿ ತನಿಖಾಧಿಕಾರಿ ಲೋಕೇಶ್‌ ಜಗಲಾಸರ್‌ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡವು ಕುಸುಮಾವತಿಯವರ ರಕ್ತದ ಮಾದರಿಯನ್ನು ಸಂಗ್ರಹಿಸಿತು.

ನ್ಯಾಯಾಲಯದ ಬಾಗಿಲು ಮುಚ್ಚಿ, ವಿಡಿಯೊ ಚಿತ್ರೀಕರಣದ ಮೂಲಕ ವೈದ್ಯರ ತಂಡವು ವಿವಿಧ ಕಿಟ್‌ಗಳನ್ನು ಬಳಸಿ ರಕ್ತದ ಮಾದರಿಯನ್ನು ಸಂಗ್ರಹಿಸಿತು. ಬಳಿಕ ಮಾದರಿಯನ್ನು ಸೀಲ್‌ ಮಾಡಿ ಎಸ್‌‍ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಸಂಗ್ರಹಿಸಲಾದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌‍ಎಲ್‌) ಕಳುಹಿಸಲಾಗುತ್ತದೆ. ಅಲ್ಲಿಂದ ವರದಿ ಬಂದ ಬಳಿಕ ಎಸ್‌‍ಐಟಿ ಅಧಿಕಾರಿಗಳು ಮುಂದಿನ ತನಿಖಾ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ಸಂಜೆ 4.30ರಿಂದ 6 ಗಂಟೆಯವರೆಗೆ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಈ ಪ್ರಕ್ರಿಯೆ ನಡೆಯಿತು. ಎಸ್‌‍ಐಟಿ ತನಿಖಾಧಿಕಾರಿ ಲೋಕೇಶ್‌ ಜಗಲಾಸರ್‌ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡವು ಕುಸುಮಾವತಿಯವರ ರಕ್ತದ ಮಾದರಿಯನ್ನು ಸಂಗ್ರಹಿಸಿತು.

Dailyhunt
Disclaimer: This content has not been generated, created or edited by Dailyhunt. Publisher: eesanje