Dailyhunt
ಟ್ರಂಪ್ ಬೆಂಬಲಿಗರ ದಾಂಧಲೆ ಕುರಿತು ತನಿಖೆಗೆ  ಬೈಡೆನ್ ಸರ್ಕಾರ ನಿರ್ಧಾರ

ಟ್ರಂಪ್ ಬೆಂಬಲಿಗರ ದಾಂಧಲೆ ಕುರಿತು ತನಿಖೆಗೆ ಬೈಡೆನ್ ಸರ್ಕಾರ ನಿರ್ಧಾರ

ಈ ಸಂಜೆ 5 years ago

ವಾಷಿಂಗ್ಟನ್,ಜ.23- ನಿರ್ಗಮಿತ ಅಧ್ಯಕ್ಷ ಟ್ರಂಪ್ ಬೆಂಬಲಿಗರು ನಡೆಸಿದ ದಾಂಧಲೆಯನ್ನು ಗಂಭೀರವಾಗಿ ಪರಿಗಣಿಸಿರುವ ಬೈಡೆನ್ ಸರ್ಕಾರ ಘಟನೆ ಕುರಿತಂತೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಕಳೆದ ಜ.6 ರಂದು ಟ್ರಂಪ್ ಬೆಂಬಲಿಗರು ನಡೆಸಿದ ದಾಳಿಯಲ್ಲಿ ಐದು ಮಂದಿ ಮೃತಪಟ್ಟಿದ್ದರು. ಅಂತಹ ದುರ್ನಡತೆ ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ ಹೀಗಾಗಿ ಆಂತರೀಕ ಹಿಂಸಾಚಾರವನ್ನು ತಡೆಗಟ್ಟುವ ಉದ್ದೇಶದಿಂದ ತನಿಖೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಶ್ವೇತಭವನ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ.

ಹಿಂಸಾಚಾರಕ್ಕೆ ಟ್ರಂಪ್ ಅವರ ನಡವಳಿಕೆಯೇ ಕಾರಣ. ಹೀಗಾಗಿ ಕಾನೂನು ಪಾಲಕರು ಟ್ರಂಪ್ ಅವರಿಗೆ ವಾಗ್ದಾಂಡನೆ ವಿಧಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾವು ಅಭಿವೃದ್ಧಿ ನೀತಿ ಆಧಾರದ ಮೇಲೆ ಅಧಿಕಾರ ನಡೆಸುತ್ತೇವೆ. ಸಂವಿಧಾನ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಹೀಗಾಗಿ ಹಿಂಸಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: eesanje