ಬೆಂಗಳೂರು, ಜು.15- ತೈಲ ಬೆಲೆ , ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ ಬಿಕ್ಕಟ್ಟು ಸೇರಿದಂತೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲು ತುರ್ತಾಗಿ ರಾಜ್ಯ ವಿಧಾನಮಂಡಲದ ಅಧಿವೇಶನ ಕರೆಯಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದರು.
ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲೇ ಅಧಿವೇಶನ ನಡೆಸಿದರೂ ನಾವು ಸ್ವಾಗತ ಮಾಡುತ್ತೇವೆ. ಬೆಂಗಳೂರು ಇಲ್ಲವೆ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಸರ್ಕಾರದ ವಿವೇಚನೆಗೆ ಬಿಟ್ಟದ್ದು. ಆದರೆ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಅಧಿವೇಶನವನ್ನು ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಕೋವಿಡ್ ಲಸಿಕೆ ನೀಡಿಕೆ, ಪರಿಹಾರ ಧನ ಬಿಡುಗಡೆ , ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಬೇಕಾಗಿದೆ.

