Dailyhunt Logo
  • Light mode
    Follow system
    Dark mode
    • Play Story
    • App Story

ಬೆಂಗಳೂರಿನಲ್ಲಿ SIR ಗೊಂದಲಕ್ಕೆ ಬ್ರೇಕ್ - ಕೇಂದ್ರ ಚುನಾವಣಾ ಆಯೋಗದಿಂದ ಹೊಸ ಮಾರ್ಗಸೂಚಿ ಪ್ರಕಟ!

Freedomtv 2 weeks ago

ಬೆಂಗಳೂರು : ಬೆಂಗಳೂರಿನಲ್ಲಿ ಗೊಂದಲಕ್ಕೆ ಕಾರಣವಾಗಿರುವSIRಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಹೊಸ ಗೈಡ್ ಲೈನ್ಸ್​ನ್ನು ಪ್ರಕಟಿಸಿದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿದೆ.

SIR ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮತದಾರರ ಹೆಸರು ಕೈಬಿಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಅನಗತ್ಯ ಗೊಂದಲಗಳನ್ನು ನಿವಾರಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ BLOಗಳಿಗೆ ಖಡಕ್ ಸೂಚನೆ ನೀಡಲಾಗಿದೆ.

ಹೊಸ ಮಾರ್ಗಸೂಚಿಯ ಪ್ರಕಾರ, ಮತದಾರರ ಪಟ್ಟಿಯಿಂದ ಯಾವುದೇ ಹೆಸರನ್ನು ಡಿಲೀಟ್ (ರದ್ದು) ಮಾಡುವ ಮುನ್ನ ರಾಜಕೀಯ ಪಕ್ಷಗಳ ಗಮನಕ್ಕೆ ತರುವುದು ಇನ್ಮುಂದೆ ಕಡ್ಡಾಯವಾಗಿರುತ್ತದೆ. ಯಾವುದೇ ಗೊಂದಲಗಳಿದ್ದರೆ ಮೊದಲು ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸಿ, ಅದನ್ನು ಸರಿಪಡಿಸಿಕೊಂಡ ನಂತರವಷ್ಟೇ ಮುಂದಿನ ಪ್ರಕ್ರಿಯೆ ನಡೆಸಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ.

ಈ ಅಂಶಗಳನ್ನ ರಾಜಕೀಯ ಪಕ್ಷಗಳ ಗಮನಕ್ಕೆ ತರೋದು ಕಡ್ಡಾಯ ಎಂದು ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Freedomtv