Dailyhunt Logo
  • Light mode
    Follow system
    Dark mode
    • Play Story
    • App Story
ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!

ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!

Guaranteenews 2 weeks ago

ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರರು ಬಳಸುವ ಹಾಫ್ ಹೆಲ್ಮೆಟ್‌ಗಳ ವಿರುದ್ಧ ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ರಸ್ತೆ ಅಪಘಾತಗಳ ಸಂದರ್ಭದಲ್ಲಿ ಸವಾರರ ತಲೆ ಮತ್ತು ಮುಖದ ಭಾಗಗಳಿಗೆ ಸೂಕ್ತ ರಕ್ಷಣೆ ಸಿಗದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರ ಸುರಕ್ಷತೆ ದೃಷ್ಟಿಯಿಂದ ಗುಣಮಟ್ಟದ ಹೆಲ್ಮೆಟ್ ಬಳಕೆಗೆ ಇಲಾಖೆ ಒತ್ತು ನೀಡಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಎಲ್ಲ ರೀತಿಯ ಹೆಲ್ಮೆಟ್‌ಗಳು ಸುರಕ್ಷಿತವಾಗಿರುವುದಿಲ್ಲ. ಅದರಲ್ಲೂ ಹಾಫ್ ಹೆಲ್ಮೆಟ್‌ಗಳು ತಲೆಯ ಪ್ರಮುಖ ಭಾಗಗಳಿಗೆ ಸಂಪೂರ್ಣ ರಕ್ಷಣೆ ನೀಡುವುದಿಲ್ಲ ಎಂಬ ಕಾರಣಕ್ಕೆ ಅವುಗಳ ಬಳಕೆಗೆ ಬ್ರೇಕ್ ಹಾಕಲಾಗಿದೆ.

ಇನ್ಮುಂದೆ ದ್ವಿಚಕ್ರ ವಾಹನ ಸವಾರರು BIS ಅಥವಾ ISI ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ. ಹೆಲ್ಮೆಟ್ ಖರೀದಿಸುವಾಗ ಅದರ ಗುಣಮಟ್ಟ ಹಾಗೂ ಸಂಬಂಧಿತ ಪ್ರಮಾಣೀಕರಣವನ್ನು ಪರಿಶೀಲಿಸುವಂತೆ ಸವಾರರಿಗೆ ಸೂಚನೆ ನೀಡಲಾಗಿದೆ.

ಹಾಫ್ ಹೆಲ್ಮೆಟ್ ಬಳಸಿದ್ರೆ ದಂಡ..!

ಸಾರಿಗೆ ಇಲಾಖೆಯ ನಿಯಮವನ್ನು ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸಿದರೆ ದಂಡ ವಿಧಿಸಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಬೈಕ್ ಮತ್ತು ಸ್ಕೂಟರ್ ಸವಾರರು ಇನ್ಮುಂದೆ ಹೆಲ್ಮೆಟ್ ಆಯ್ಕೆ ಮಾಡುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ.

ಕೇವಲ ತಲೆಗೆ ಹೆಲ್ಮೆಟ್ ಹಾಕಿಕೊಂಡಿದ್ದೇನೆ ಎಂಬ ಕಾರಣಕ್ಕೆ ನಿಯಮ ಪಾಲನೆಯಾಗಿದೆ ಎಂದು ಭಾವಿಸುವಂತಿಲ್ಲ. ಸರ್ಕಾರ ನಿಗದಿಪಡಿಸಿರುವ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿರುವ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಲಿದೆ. ಹೀಗಾಗಿ ಈಗಾಗಲೇ ಹಾಫ್ ಹೆಲ್ಮೆಟ್ ಬಳಸುತ್ತಿರುವ ಸವಾರರು ತಮ್ಮ ಹೆಲ್ಮೆಟ್ ಬದಲಾಯಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.

ತಯಾರಕರು, ಮಾರಾಟಗಾರರಿಗೂ ವಾರ್ನಿಂಗ್

ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ಧ ಮಾತ್ರವಲ್ಲದೆ, ಇಂತಹ ಹೆಲ್ಮೆಟ್‌ಗಳ ತಯಾರಕರು ಹಾಗೂ ಮಾರಾಟಗಾರರ ಮೇಲೂ ಸಾರಿಗೆ ಇಲಾಖೆ ಕಣ್ಣಿಟ್ಟಿದೆ. ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಹೆಲ್ಮೆಟ್‌ಗಳ ತಯಾರಿಕೆ ಮತ್ತು ಮಾರಾಟಕ್ಕೆ ಮುಂದಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮಾರುಕಟ್ಟೆಯಲ್ಲಿ ಗುಣಮಟ್ಟವಿಲ್ಲದ ಅಥವಾ ಅಗತ್ಯ ಸುರಕ್ಷತಾ ಮಾನದಂಡಗಳನ್ನು ಪೂರೈಸದ ಹೆಲ್ಮೆಟ್‌ಗಳ ಮಾರಾಟ ನಡೆಯದಂತೆ ಕ್ರಮ ಕೈಗೊಳ್ಳುವ ಸೂಚನೆ ನೀಡಲಾಗಿದೆ. ಇದರೊಂದಿಗೆ ಗ್ರಾಹಕರು ಕೂಡ ಹೆಲ್ಮೆಟ್ ಖರೀದಿಸುವ ಮುನ್ನ ಅದು BIS/ISI ಮಾನದಂಡಗಳನ್ನು ಪೂರೈಸುತ್ತದೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ.

ರಾಜ್ಯದಲ್ಲಿ ದ್ವಿಚಕ್ರ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ ಪ್ರಮುಖ ವಿಷಯವಾಗಿದೆ. ಅಪಘಾತದ ಸಂದರ್ಭದಲ್ಲಿ ತಲೆಗೆ ಗಂಭೀರ ಗಾಯವಾಗುವುದನ್ನು ತಪ್ಪಿಸುವಲ್ಲಿ ಗುಣಮಟ್ಟದ ಹೆಲ್ಮೆಟ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆ ಸವಾರರಲ್ಲಿ ಸುರಕ್ಷಿತ ಹೆಲ್ಮೆಟ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವುದು ಇಲಾಖೆಯ ಉದ್ದೇಶವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Guaranteenews