Dailyhunt Logo
  • Light mode
    Follow system
    Dark mode
    • Play Story
    • App Story
ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಧಿಕೃತ ಘೋಷಣೆ

ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಧಿಕೃತ ಘೋಷಣೆ

Guaranteenews 2 weeks ago

ಬೆಂಗಳೂರು, ಮೇ 28:ಕರ್ನಾಟಕದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಗೊಂದಲಕ್ಕೆ ಇಂದು ತೆರೆ ಬೀಳಲಿದೆ.

ಇಂದು ಬೆಳಿಗ್ಗೆ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಉಪಹಾರ ಸಭೆ (ಬ್ರೇಕ್‌ಫಾಸ್ಟ್ ಮೀಟಿಂಗ್) ವೇಳೆ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಸಚಿವ ಸಂಪುಟದ ಸದಸ್ಯರೊಂದಿಗೆ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದ ಹೈಕಮಾಂಡ್‌ನ ಸೂಚನೆ ಹಾಗೂ ಮುಂದಿನ ನಾಯಕತ್ವದ ಕುರಿತು ಮಹತ್ವದ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಸಂವಿಧಾನಾತ್ಮಕ ಪ್ರಕ್ರಿಯೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ ಅಥವಾ ತಡರಾತ್ರಿಯೊಳಗೆ ಬೆಂಗಳೂರಿಗೆ ಮರಳುವ ನಿರೀಕ್ಷೆಯಿದ್ದು, ಅವರ ಆಗಮನದ ನಂತರ ರಾಜೀನಾಮೆ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.

ಇಂದಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದಿದ್ದು, ಗಮನ ಸೆಳೆದಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಪಕ್ಷ ಒಗ್ಗಟ್ಟಿನಿಂದ ಮುಂದುವರಿಯಲಿದೆ ಎಂಬ ಸಂದೇಶವನ್ನು ನಾಯಕರು ನೀಡಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಹಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷದೊಳಗೆ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿದ್ದವು. ಮುಖ್ಯಮಂತ್ರಿ ಸ್ಥಾನ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲೂ ಅನೇಕ ಸುತ್ತಿನ ಮಾತುಕತೆಗಳು ನಡೆದಿದ್ದವು ಎನ್ನಲಾಗಿದೆ. ಇದೀಗ ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಸಿದ್ದರಾಮಯ್ಯ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Dailyhunt
Disclaimer: This content has not been generated, created or edited by Dailyhunt. Publisher: Guaranteenews