Dailyhunt Logo
  • Light mode
    Follow system
    Dark mode
    • Play Story
    • App Story
"ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್": ಸಿಎಂ ಸಿದ್ದರಾಮಯ್ಯ ಘೋಷಣೆ

"ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್": ಸಿಎಂ ಸಿದ್ದರಾಮಯ್ಯ ಘೋಷಣೆ

Guaranteenews 0 months ago

ಬೆಂಗಳೂರು, ಮೇ 28:ಕರ್ನಾಟಕದ ರಾಜಕೀಯದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ. 'ಮುಂದಿನ ಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್' ಎಂದು ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ನಡೆದ ಉಪಹಾರ ಸಭೆಯಲ್ಲಿ ಪ್ರಕಟಿಸಿದರು.

ರಾಜ್ಯ ಕಾಂಗ್ರೆಸ್‌ನ ಪ್ರಮುಖ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದ ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ನಿರ್ಧಾರವನ್ನು ಸಹ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. 'ನನಗೆ ಯಾವುದೇ ನೋವಿಲ್ಲ. ನಾನು ಸ್ವಇಚ್ಛೆಯಿಂದಲೇ ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ' ಎಂದು ಅವರು ಸಚಿವರ ಮುಂದೆ ಹೇಳಿರುವ ಮಾಹಿತಿ ಲಭ್ಯವಾಗಿದೆ.

ಸಭೆಯಲ್ಲಿ ಭಾಗವಹಿಸಿದ್ದ ಸಚಿವರು ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ಒಮ್ಮತದ ಬೆಂಬಲ ಸೂಚಿಸಿರುವುದಾಗಿ ತಿಳಿದುಬಂದಿದೆ. ಇದೇ ವೇಳೆ ಬಿಜೆಪಿ ವಿರುದ್ಧ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಹಾಗೂ ಸರ್ಕಾರದ ಉತ್ತಮ ಕಾರ್ಯಗಳನ್ನು ಜನರಿಗೆ ತಲುಪಿಸುವಂತೆ ಸಿಎಂ ತಮ್ಮ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗೆ ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದ ಮೇರೆಗೆ ಈ ನಾಯಕತ್ವ ಬದಲಾವಣೆ ಪ್ರಕ್ರಿಯೆ ನಡೆದಿರುವುದಾಗಿ ವರದಿಯಾಗಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಅಧ್ಯಾಯ ಆರಂಭವಾಗುವ ಸೂಚನೆಗಳು ಕಾಣಿಸುತ್ತಿವೆ.

ಇದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3:30ಕ್ಕೆ ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಚರ್ಚೆ ನಡೆಸಿದ ಬಳಿಕ ಮುಂದಿನ ರಾಜಕೀಯ ಬೆಳವಣಿಗೆಗಳು ರೂಪ ಪಡೆಯುವ ಸಾಧ್ಯತೆ ಇದೆ.

ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಸಭೆಯ ನಂತರ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದ ದೃಶ್ಯಗಳು ಹಾಗೂ ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡಿರುವ ಭಾವನಾತ್ಮಕ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ರಾಜಕೀಯ ವಲಯದಲ್ಲಿ ಈ ಬೆಳವಣಿಗೆಗೆ ಭಾರೀ ಮಹತ್ವ ಸಿಕ್ಕಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮೇ 29ರಂದು ನಡೆಯಲಿದೆ. ಈ ಸಭೆಯಲ್ಲಿ ಹೊಸ ನಾಯಕನ ಆಯ್ಕೆ ಕುರಿತ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಪದಗ್ರಹಣಕ್ಕೆ ವೇದಿಕೆ ಸಿದ್ಧವಾಗುತ್ತಿದೆ ಎಂದು ಹೇಳಲಾಗ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Guaranteenews