Dailyhunt
ಮೊದಲ ಹಾಡಿನಲ್ಲಿ ಮೋಡಿ ಮಾಡಿದ "ಪಿಚ್ಚರ್"

ಮೊದಲ ಹಾಡಿನಲ್ಲಿ ಮೋಡಿ ಮಾಡಿದ "ಪಿಚ್ಚರ್"

Guaranteenews 1 week ago

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ ನಟಿಸಿರುವ ಚಿತ್ರ ಪಿಚ್ಚರ್. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ನಿರ್ಮಾಣವಾಗಿರುವ ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಕನ್ನಡದಲ್ಲಿ ಈ ಹಾಡನ್ನು ಚೇತನ್ ಕುಮಾರ್ ಬರೆದರೆ, ತುಳುವಿನಲ್ಲಿ ಅನೂಪ್ ಭಂಡಾರಿ ಬರೆದಿದ್ದಾರೆ. ಬಿಡುಗಡೆಯಾದ ಕ್ಷಣದಿಂದಲೇ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸ್ಯಾಮುಯೆಲ್‌ ಅಭಿ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಈಗ ಮೊದಲ ಹಾಡು ಬಿಡುಗಡೆಯಾಗಿದೆ. ಉಳಿದ ಹಾಡುಗಳು ಸದ್ಯದಲ್ಲೇ ರಿಲೀಸ್‌ ಆಗಲಿದೆ.

ಕೌಟುಂಬಿಕ, ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮನೋರಂಜನೆಯೇ ಪ್ರಧಾನ. ಕಳೆದ ಹದಿನೈದು ವರ್ಷಗಳ ಸಹಾಯಕ ಹಾಗೂ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿತ್ತಿರುವ ಸಂದೀಪ್ ಬೆದ್ರ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈಗಾಗಲೇ ಮಂಗಳೂರು, ಬಂಟ್ವಾಳ, ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ಮುಗಿಸಿರುವ 'ಪಿಚ್ಚರ್', ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ.

ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಛಾಯಾಗ್ರಹಣವಿದೆ. ರಾಜು ಆರ್ಯನ್ ಸಂಕಲನ, ಧನಂಜಯ್.ಬಿ - ಶ್ರೀರಾಜು ನೃತ್ಯ ನಿರ್ದೇಶನ, ರಾಧೇಶ್-ಸಂತೋಷ್ ಪೂಜಾರಿ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಭಟ್ಕಳ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ನಿತ್ಯಪ್ರಕಾಶ್ ಬಂಟ್ವಾಳ 'ಪಿಚ್ಚರ್' ಚಿತ್ರದ ನಾಯಕನಾಗಿದ್ದು, ನಾಯಕಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್, ಸಂದೀಪ್ ಶೆಟ್ಟಿ ಮಾಣಿ, ಉಮೇಶ್ ಪೂಜಾರ್, ಜಯಶೀಲ ಮರೊಲಿ, ರೂಪ ವರ್ಕಾಡಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Guaranteenews