Dailyhunt
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಗದಗ, 04 ಏಪ್ರಿಲ್ (ಹಿ.ಸ.) :

ಯಂಕರ್ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಗದಗ ಜಿಲ್ಲೆಯಲ್ಲಿ ಹೊಸದಾಗಿ ಗ್ರೇಡ್ -1 ಗ್ರಾಮ ಪಂಚಾಯತಿಯಾಗಿ ಮಾರ್ಪಟ್ಟ ಹಲವು ಪಂಚಾಯತಿಗಳಿಗೆ ಹೆಚ್ಚುವರಿಯಾಗಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಪಂಚಾಯತ್ ಹಾಗೂ ಬಿದರಹಳ್ಳಿ ಗ್ರಾಮ ಪಂಚಾಯತ್ , ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮ ಪಂಚಾಯತ್ಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸುವುದು. ಇನ್ನಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲವೆಂದು ತಿಳಿಸಿದೆ. ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada