Dailyhunt Logo
  • Light mode
    Follow system
    Dark mode
    • Play Story
    • App Story
ಐದು ರಾಷ್ಟ್ರಗಳ ಪ್ರವಾಸ ಮುಗಿಸಿ ಸ್ವದೇಶಕ್ಕೆ ಪ್ರಧಾನಿ ಮೋದಿ

ಐದು ರಾಷ್ಟ್ರಗಳ ಪ್ರವಾಸ ಮುಗಿಸಿ ಸ್ವದೇಶಕ್ಕೆ ಪ್ರಧಾನಿ ಮೋದಿ

ರೋಮ್, 21 ಮೇ (ಹಿ.ಸ.) :

ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಐದು ರಾಷ್ಟ್ರಗಳಾದ ಯುನೈಟೆಡ್ ಅರಬ್ ಎಮಿರೇಟ್ಸ್, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಹಾಗೂ ಇಟಲಿಯ ಅಧಿಕೃತ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ರೋಮ್ನಿಂದ ಭಾರತಕ್ಕೆ ಮರಳಿದ್ದಾರೆ.

ಇನ್ನೂ ಕೆಲವೇ ಗಂಟೆಗಳಲ್ಲಿ ಅವರು ಸ್ವದೇಶ ತಲುಪಲಿದ್ದಾರೆ.

ಪ್ರವಾಸದ ಅಂತಿಮ ಹಂತದಲ್ಲಿ ಇಟಲಿಯ ರಾಜಧಾನಿ ರೋಮ್ನಲ್ಲಿ ಪ್ರಧಾನಿ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ವೇಳೆ ಭಾರತ-ಇಟಲಿ ಸಂಬಂಧಗಳನ್ನು "ವಿಶೇಷ ತಂತ್ರಾತ್ಮಕ ಭಾಗಿದಾರಿ" ಮಟ್ಟಕ್ಕೆ ಏರಿಸಲು ಉಭಯ ರಾಷ್ಟ್ರಗಳು ಒಪ್ಪಿಗೆ ಸೂಚಿಸಿವೆ.

ರೋಮ್ನಿಂದ ಭಾರತಕ್ಕೆ ಪ್ರಯಾಣ ಬೆಳೆಸುವ ಮುನ್ನ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪ್ರಧಾನಿ ಮೋದಿ ತಮ್ಮ ಪ್ರವಾಸವನ್ನು ಯಶಸ್ವಿಯೆಂದು ಬಣ್ಣಿಸಿದರು. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ವಿವಿಧ ಕ್ಷೇತ್ರಗಳ ಸಹಕಾರ, ವ್ಯಾಪಾರ, ತಂತ್ರಜ್ಞಾನ ಹಾಗೂ ಜಾಗತಿಕ ವಿಚಾರಗಳ ಕುರಿತು ಫಲಪ್ರದ ಚರ್ಚೆ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.

ಭಾರತ-ಇಟಲಿ ಸಂಬಂಧಗಳನ್ನು ವಿಶೇಷ ತಂತ್ರಾತ್ಮಕ ಸಹಭಾಗಿತ್ವದ ಹಂತಕ್ಕೆ ಕೊಂಡೊಯ್ಯುವ ನಿರ್ಧಾರವು ಎರಡೂ ದೇಶಗಳ ಸಹಕಾರಕ್ಕೆ ಹೊಸ ಚೈತನ್ಯ ನೀಡಲಿದ್ದು, ಜಾಗತಿಕ ಮಟ್ಟದಲ್ಲಿಯೂ ಅದರ ಪ್ರಯೋಜನ ದೊರೆಯಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಇಟಲಿ ಸರ್ಕಾರ ಮತ್ತು ಅಲ್ಲಿನ ಜನರಿಗೆ ಆತಿಥ್ಯಕ್ಕಾಗಿ ಅವರು ಧನ್ಯವಾದ ತಿಳಿಸಿದ್ದಾರೆ.

ಇದೇ ವೇಳೆ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಅವರು ಕೂಡ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಮೋದಿ ಅವರ ಐದು ರಾಷ್ಟ್ರಗಳ ಪ್ರವಾಸ ಮಹತ್ವದ ಫಲಿತಾಂಶಗಳನ್ನು ತಂದಿದೆ ಎಂದು ಹೇಳಿದ್ದಾರೆ. ವಿಶೇಷವಾಗಿ ಇಟಲಿಯೊಂದಿಗೆ ತಂತ್ರಾತ್ಮಕ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೊಸ ವೇಗ ಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada