Dailyhunt Logo
  • Light mode
    Follow system
    Dark mode
    • Play Story
    • App Story
ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಅಶೋಕ್ ಮನಗೂಳಿ ಚಾಲನೆ

ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಅಶೋಕ್ ಮನಗೂಳಿ ಚಾಲನೆ

ವಿಜಯಪುರ, 05 ಆಗಸ್ಟ್ (ಹಿ.ಸ.)

ಯಂಕರ್ : ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸತಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಿಂದಗಿ ನಗರದಲ್ಲಿ ಮತ್ತೊಂದು ಮಹತ್ವದ ಅಭಿವೃದ್ಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರೆಯಿತು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಜಿಲ್ಲಾ ಪಂಚಾಯತ್ ವಿಜಯಪುರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಿಂದಗಿ ಇವರ ಸಂಯುಕ್ತ ಆಶ್ರಯದಲ್ಲಿ ಒಟ್ಟು ₹11.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಡಾ.

ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ಮನಗೂಳಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಸಿಂದಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಸಮೀಪ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅಶೋಕ್ ಮನಗೂಳಿ, ಸಮಾಜದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸುರಕ್ಷಿತ ಹಾಗೂ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.

ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮೂಲಸೌಕರ್ಯ ಒದಗಿಸುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದು ತಿಳಿಸಿದರು.

ನೂತನ ವಿದ್ಯಾರ್ಥಿ ನಿಲಯ ಕಟ್ಟಡಗಳು ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ವಾಸದ ವ್ಯವಸ್ಥೆ, ಅಧ್ಯಯನಕ್ಕೆ ಅನುಕೂಲಕರ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಿವೆ. ಈ ಯೋಜನೆ ಪೂರ್ಣಗೊಂಡ ಬಳಿಕ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಯೋಜನೆಯ ವಿವರಗಳನ್ನು ನೀಡಿದರು. ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಯೋಜನೆಗೆ ಶುಭ ಹಾರೈಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada