Dailyhunt Logo
  • Light mode
    Follow system
    Dark mode
    • Play Story
    • App Story
ಅಣ್ಣಿಗೇರಿಯಲ್ಲಿ ಬಕ್ರೀದ್ ಸಂಭ್ರಮ ; ಶಾಸಕ ಕೋನರೆಡ್ಡಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿ

ಅಣ್ಣಿಗೇರಿಯಲ್ಲಿ ಬಕ್ರೀದ್ ಸಂಭ್ರಮ ; ಶಾಸಕ ಕೋನರೆಡ್ಡಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿ

ಹುಬ್ಬಳ್ಳಿ, 28 ಮೇ (ಹಿ.ಸ.) :

ಯಂಕರ್ : ನವಲಗುಂದ ವಿಧಾನ ಸಭಾ ಕ್ಷೇತ್ರದ ಅಣ್ಣಿಗೇರಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಈದ್ಗಾ ಮೈದಾನದಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಈ ವೇಳೆ ಮಾತನಾಡಿದ ಅವರು, "ಬಕ್ರೀದ್ ಹಬ್ಬವು ತ್ಯಾಗ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾಗಿದೆ. ಈ ವಿಶೇಷ ಹಬ್ಬವು ಎಲ್ಲರ ಬದುಕಿನಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ತರಲಿ. ಜೊತೆಗೆ ಮುಂಗಾರು ಮಳೆ ಸಮೃದ್ಧಿಯಾಗಿ ಸುರಿದು ರೈತರಿಗೆ ಉತ್ತಮ ಬೆಳೆ ಬರಲಿ ಎಂದು ಪರಮದಯಾಳು ಅಲ್ಲಾಹನಲ್ಲಿ ಪ್ರಾರ್ಥಿಸಿದ್ದೇನೆ" ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada