Dailyhunt
ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ: ಸರ್ಬಾನಂದ ಸೋನೊವಾಲ್

ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ: ಸರ್ಬಾನಂದ ಸೋನೊವಾಲ್

ನವದೆಹಲಿ, 04 ಏಪ್ರಿಲ್ (ಹಿ.ಸ.):

ಆಯಂಕರ್:

ಸ್ಸಾಂ ವಿಧಾನಸಭಾ ಚುನಾವಣೆಯ ಕುರಿತು ಮಾತನಾಡಿರುವ , ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರು ರಾಜ್ಯದಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸತತ ಮೂರನೇ ಬಾರಿ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ ಸುದ್ದಿ ಸಂಸ್ಥೆ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ಅಸ್ಸಾಂನಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ರಸ್ತೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆ ತರಲಾಗಿದೆ ಎಂದು ಹೇಳಿದರು. ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಆಸ್ಪತ್ರೆಗಳಲ್ಲಿ ಔಷಧಿಗಳ ಲಭ್ಯತೆ ಮತ್ತು ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಪ್ರಮುಖ ಸಾಧನೆಗಳಾಗಿವೆ ಎಂದರು.

2016ರ ಮೊದಲು ಕಾಂಗ್ರೆಸ್ ಆಡಳಿತದಲ್ಲಿ ಜನರಿಗೆ ಮೂಲಭೂತ ಸೌಲಭ್ಯಗಳು ಲಭ್ಯವಾಗಲಿಲ್ಲ ಎಂದು ಆರೋಪಿಸಿದ ಸೋನೊವಾಲ್, ಭ್ರಷ್ಟಾಚಾರ ಮತ್ತು ಅಕ್ರಮ ನುಸುಳುಕೋರರ ಸಮಸ್ಯೆ ಹೆಚ್ಚಾಗಿತ್ತು ಎಂದು ಟೀಕಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶೌಚಾಲಯ ನಿರ್ಮಾಣ, ಉಜ್ವಲ ಯೋಜನೆ ಮತ್ತು ಜನಧನ್ ಯೋಜನೆಗಳ ಮೂಲಕ ಜನರ ಜೀವನಮಟ್ಟ ಸುಧಾರಿಸಲಾಗಿದೆ ಎಂದರು.

ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ಸರ್ಕಾರ ಪ್ರೋತ್ಸಾಹ ನೀಡಿದ್ದು, ಬಿಹು, ಬಾಗೂರುಂಬಾ ಮತ್ತು ಜುಮುರ್ ನೃತ್ಯಗಳಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿನ ನೀಡಲಾಗಿದೆ ಎಂದು ಹೇಳಿದರು.

ಭೂ ಅತಿಕ್ರಮಣ ವಿರೋಧಿ ಕ್ರಮಗಳ ಕುರಿತು ಮಾತನಾಡಿದ ಅವರು, ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅತಿಕ್ರಮಣಕಾರರನ್ನು ತೆರವುಗೊಳಿಸಿ, ಲಕ್ಷಾಂತರ ಬಿಘಾ ಭೂಮಿಯನ್ನು ಮರಳಿ ಪಡೆದು ಸ್ಥಳೀಯರಿಗೆ ಹಂಚಲಾಗಿದೆ ಎಂದರು.

ಚಹಾ ತೋಟ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡ ಕ್ರಮಗಳನ್ನು ವಿವರಿಸಿದ ಸೋನೊವಾಲ್, ವೇತನವನ್ನು 94 ರೂಪಾಯಿಯಿಂದ 250 ರೂಪಾಯಿಗೆ ಹೆಚ್ಚಿಸಲಾಗಿದೆ ಹಾಗೂ ಮುಂದಿನ ಐದು ವರ್ಷಗಳಲ್ಲಿ 500 ರೂಪಾಯಿಗೆ ಏರಿಸಲಾಗುತ್ತದೆ ಎಂದು ಹೇಳಿದರು. ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳು, ನಗದು ನೆರವು, ಆರೋಗ್ಯ ಸೌಲಭ್ಯಗಳು ಮತ್ತು ಶಿಕ್ಷಣದ ಅವಕಾಶಗಳನ್ನು ಒದಗಿಸಲಾಗಿದೆ ಎಂದರು.

ಮಹಿಳಾ ಸಬಲೀಕರಣಕ್ಕೂ ಸರ್ಕಾರ ಆದ್ಯತೆ ನೀಡಿದ್ದು, ಗರ್ಭಿಣಿಯರಿಗೆ ಆರ್ಥಿಕ ನೆರವು ಹಾಗೂ ಮಹಿಳೆಯರ ಖಾತೆಗಳಿಗೆ ನೇರ ಹಣ ವರ್ಗಾವಣೆ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಸವಾಲುಗಳಿಗೆ ಭಾರತ ತಂತ್ರಾತ್ಮಕವಾಗಿ ಎದುರಿಸುತ್ತಿದ್ದು, ಸಾಗಾಣಿಕೆ ಮತ್ತು ವ್ಯಾಪಾರದಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada