ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) :
ಆಯಂಕರ್ : ಬಾಗಲಕೋಟೆ ಕಮತಗಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬಹುಮತದ ಗೆಲುವು ದೊರಕಿಸುವಂತೆ ಸಾರ್ವಜನಿಕರಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರೊಂದಿಗೆ ನೇರ ಸಂವಾದ ನಡೆಸಿ, ರಾಜ್ಯ ಸರ್ಕಾರದ ಜನಪರ ಹಾಗೂ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳನ್ನು ವಿವರಿಸಿ, ಅಭಿವೃದ್ಧಿ ಮತ್ತು ಬಡವರ ಕಲ್ಯಾಣಕ್ಕಾಗಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ ಅವರು ಹಾಗೂ ನಾಯಕರು ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande

