ಬಾಗಲಕೋಟೆ, 04 ಏಪ್ರಿಲ್ (ಹಿ.ಸ.) :
ಆಯಂಕರ್ : ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಬೆನಕಟ್ಟಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರ ಪರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಭರ್ಜರಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಬೆನಕಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಯತ್ನಾಳ ಅವರಿಗೆ ಗ್ರಾಮಕ್ಕೆ ಆಗಮಿಸಿದಾಗ ಅಭಿಮಾನಿಗಳು ಹೂವಿನ ಮಳೆ ಸುರಿಸಿ ಭರ್ಜರಿ ಸ್ವಾಗತ ಕೋರಿದರು. ಮಹಿಳೆಯರು ಆರತಿ ಬೆಳಗಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ನಡೆದ ಬೈಕ್ ರ‍್ಯಾಲಿಯಲ್ಲೂ ಅವರು ಭಾಗವಹಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.
ಈ ವೇಳೆ ಶಾಸಕರಾದ ಸಿದ್ದು ಸವದಿ, ಮಾಜಿ ಶಾಸಕರಾದ ದೊಡ್ಡನಗೌಡರ ಪಾಟೀಲ ಸೇರಿದಂತೆ ಅನೇಕ ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಮಹಿಳೆಯರು ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande

