Dailyhunt Logo
  • Light mode
    Follow system
    Dark mode
    • Play Story
    • App Story
ಬೆಂಗಳೂರು ಕಲ್ಲು ಕ್ವಾರಿ ದುರಂತ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು ಕಲ್ಲು ಕ್ವಾರಿ ದುರಂತ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ, 02 ಜುಲೈ (ಹಿ.ಸ.):

ಆಯಂಕರ್:

ಬೆಂಗಳೂರು ನಗರ ಜಿಲ್ಲೆಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಹಲವರು ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದ್ದು, ಈ ದುರಂತದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ಅತ್ಯಂತ ನೋವುಂಟು ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ತಮ್ಮ ಆಳವಾದ ಸಂತಾಪವನ್ನು ಸಲ್ಲಿಸಿರುವ ಅವರು, ದುಃಖದ ಈ ಸಂದರ್ಭದಲ್ಲಿ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿರುವ ಪ್ರಧಾನಿ, ಗಾಯಾಳುಗಳ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಪ್ರಾರ್ಥಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada