Dailyhunt
ಬೇವೂರ ಗ್ರಾಮದಲ್ಲಿ ಉಮೇಶ್ ಮೇಟಿ ಪರ ಸಚಿವ ರಾಮಲಿಂಗ ರೆಡ್ಡಿ ಮತಯಾಚನೆ

ಬೇವೂರ ಗ್ರಾಮದಲ್ಲಿ ಉಮೇಶ್ ಮೇಟಿ ಪರ ಸಚಿವ ರಾಮಲಿಂಗ ರೆಡ್ಡಿ ಮತಯಾಚನೆ

ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :

ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಬೇವೂರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಸಚಿವ ರಾಮಲಿಂಗ ರೆಡ್ಡಿ ಪ್ರಚಾರ ಹಾಗೂ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವ ರಾಮಲಿಂಗರೆಡ್ಡಿ ಅವರೊಂದಿಗೆ ಮುಖಂಡರು ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಉಮೇಶ್ ಮೇಟಿ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಜನಸೇವೆಗೆ ಬದ್ಧರಾಗಿರುವ ಉಮೇಶ್ ಮೇಟಿ ಅವರಿಗೆ ಬೆಂಬಲ ನೀಡುವಂತೆ ಮತದಾರರನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಸಕ ಜೆ.ಟಿ. ಪಾಟೀಲ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada