Dailyhunt
ಡಿ. ಆರ್. ಪಾಟೀಲರಿಗೆ ಸಂಯಮ ಪ್ರಶಸ್ತಿ ಪ್ರದಾನ

ಡಿ. ಆರ್. ಪಾಟೀಲರಿಗೆ ಸಂಯಮ ಪ್ರಶಸ್ತಿ ಪ್ರದಾನ

ಗದಗ, 02 ಏಪ್ರಿಲ್ (ಹಿ.ಸ.) :

ಯಂಕರ್ : ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರು ನಗರದ ಗಾಂಧಿ ಭವನದಲ್ಲಿರುವ ಮಹದೇವ ದೇಸಾಯಿ ಸಭಾಂಗಣದಲ್ಲಿ ನಡೆಯಿತು.

2023ನೇ ಸಾಲಿನ ಸಂಯಮ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.

ಪಾಟೀಲ, 2024ನೇ ಸಾಲಿನ ಸಂಯಮ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ್ ಹಾಗೂ 2025ನೇ ಸಾಲಿನ ಸಂಯಮ ಪ್ರಶಸ್ತಿಯನ್ನು ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಅಧ್ಯಕ್ಷರಾದ ನಾಡೋಜ ಡಾ.ವೂಡೇ ಪಿ.ಕೃಷ್ಣ ರವರಿಗೆ ನೀಡಿ ಗೌರವಿಸಲಾಯಿತು.

ಈ ಸಮಾರಂಭದಲ್ಲಿ, ಕರ್ನಾಟಕ ಸರ್ಕಾರದ ಮಾನ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗರೆಡ್ಡಿ, ಕರ್ನಾಟಕ ಸರ್ಕಾರದ ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಮಾನ್ಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾದ ಬಿ.ಬಿ.ಕಾವೇರಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada