Dailyhunt Logo
  • Light mode
    Follow system
    Dark mode
    • Play Story
    • App Story

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ: ನಾಳೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಎನ್ಡಿಎ ದೂರು

ಬೆಂಗಳೂರು, 05 ಜುಲೈ (ಹಿ.ಸ.):

ಆಯಂಕರ್:

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಎನ್‌ಡಿಎ ನಾಯಕರು, ಈ ಸಂಬಂಧ ಸೋಮವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಅಧಿಕೃತ ದೂರು ಸಲ್ಲಿಸಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯವರ ಕಚೇರಿಗೆ ನಿಯೋಗ ತೆರಳಿ ಮನವಿ ಸಲ್ಲಿಸಲಿದ್ದು, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ನೇತೃತ್ವ ವಹಿಸಲಿದ್ದಾರೆ.

ನಿಯೋಗದಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಸೇರಿದಂತೆ ಬಿಜೆಪಿ-ಜೆಡಿಎಸ್‌ನ ಹಲವು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಅಕ್ರಮಗಳು ಹಾಗೂ ಮತದಾರರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಮುಖ್ಯ ಚುನಾವಣಾಧಿಕಾರಿಯ ಗಮನಕ್ಕೆ ತಂದು, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಬಿಜೆಪಿ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada