Dailyhunt
ಗುಜರಾತ್ ಹೇಳಿಕೆ ವಿವಾದ: ವಿಷಾದ ವ್ಯಕ್ತಪಡಿಸಿದ ಖರ್ಗೆ

ಗುಜರಾತ್ ಹೇಳಿಕೆ ವಿವಾದ: ವಿಷಾದ ವ್ಯಕ್ತಪಡಿಸಿದ ಖರ್ಗೆ

ನವದೆಹಲಿ, 08 ಏಪ್ರಿಲ್ (ಹಿ.ಸ.):

ಆಯಂಕರ್:

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರ ಕುರಿತು ನೀಡಿದ ಹೇಳಿಕೆ ವಿವಾದಕ್ಕೀಡಾದ ಹಿನ್ನೆಲೆಯಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪ್ರತಿಕ್ರಿಯೆ ನೀಡಿದ ಖರ್ಗೆ, ಗುಜರಾತ್ ಜನರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ತನ್ನದಾಗಿರಲಿಲ್ಲ ಎಂದು ಹೇಳಿದ್ದಾರೆ. "ನಾನು ಯಾವಾಗಲೂ ಗುಜರಾತ್ ಜನರ ಬಗ್ಗೆ ಅತ್ಯಂತ ಗೌರವ ಹೊಂದಿದ್ದೇನೆ. ಆದರೆ ಕೆಲವು ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ನಿರೂಪಿಸಲಾಗಿದೆ. ಇದರಿಂದ ಯಾರಾದರೂ ನೋವಿಗೆ ಗುರಿಯಾದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ," ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕೇರಳ ರಾಜ್ಯದ ಇಡುಕ್ಕಿಯಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ವೇಳೆ, ಕೇರಳದ ಜನರು ವಿದ್ಯಾವಂತರು, ಬುದ್ಧಿವಂತರಾಗಿದ್ದು ಅವರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದರು. ಇದೇ ವೇಳೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಟೀಕೆ ಮಾಡುತ್ತಾ, ಗುಜರಾತ್ ಸೇರಿದಂತೆ ಕೆಲವು ಪ್ರದೇಶಗಳ ಜನರನ್ನು "ಮೂರ್ಖರನ್ನಾಗಿಸಬಹುದು" ಎಂಬ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada