Dailyhunt

ಇರಾನ್ ನಿಂದ ಭಾರತೀಯ ಮೀನುಗಾರರು ಸುರಕ್ಷಿತ ವಾಪಸು

Hindusthan Samachar 0 months ago

ನವದೆಹಲಿ, 04 ಏಪ್ರಿಲ್ (ಹಿ.ಸ.) :

ಯಂಕರ್ : ಇರಾನ್ ನಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ವಾಪಸು ಕರೆತರುವ ಕಾರ್ಯಾಚರಣೆಯಲ್ಲಿ ಸಹಕಾರ ನೀಡಿದ ಅರ್ಮೇನಿಯಾ ಸರ್ಕಾರಕ್ಕೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಶನಿವಾರ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ಅರ್ಮೇನಿಯಾದ ವಿದೇಶಾಂಗ ಸಚಿವ ಅರಾರತ್ ಮಿರ್ಜೋಯನ್ ಹಾಗೂ ಅರ್ಮೇನಿಯಾ ಸರ್ಕಾರದ ಸಹಕಾರವನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಹಯೋಗದ ಫಲವಾಗಿ ಇರಾನ್ನಲ್ಲಿ ಸಿಲುಕಿದ್ದ ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ, ಅರ್ಮೇನಿಯಾ ಮಾರ್ಗವಾಗಿ ಭಾರತಕ್ಕೆ ಮರಳಿ ಕರೆತರಲಾಗಿದೆ ಎಂದು ತಿಳಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಸಂಬಂಧಿತ ಸಂಸ್ಥೆಗಳ ಸಮನ್ವಯದೊಂದಿಗೆ ಈ ಸ್ಥಳಾಂತರ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮೀನುಗಾರರಿಗೆ ಸುರಕ್ಷಿತ ಮಾರ್ಗವನ್ನು ಕಲ್ಪಿಸಿ, ಅವರೆಲ್ಲರನ್ನು ಅರ್ಮೇನಿಯಾ ಮೂಲಕ ದೇಶಕ್ಕೆ ಕರೆತರಲಾಗಿದೆ.

ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕುವ ಭಾರತೀಯರ ಸುರಕ್ಷತೆ ಮತ್ತು ಶೀಘ್ರ ವಾಪಸಾತಿ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ದಿಕ್ಕಿ ನಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada