Dailyhunt Logo
  • Light mode
    Follow system
    Dark mode
    • Play Story
    • App Story
ಜಾಗತಿಕ ಸಾಮರ್ಥ್ಯ ಕೇಂದ್ರಗಳ ರಾಜಧಾನಿಯಾಗಿ ಹೊರಹೊಮ್ಮಿದ ಬೆಂಗಳೂರು

ಜಾಗತಿಕ ಸಾಮರ್ಥ್ಯ ಕೇಂದ್ರಗಳ ರಾಜಧಾನಿಯಾಗಿ ಹೊರಹೊಮ್ಮಿದ ಬೆಂಗಳೂರು

ಬೆಂಗಳೂರು, 08 ಜುಲೈ (ಹಿ.ಸ.):

ಆಯಂಕರ್:

ಬೆಂಗಳೂರು ಜಾಗತಿಕ ಸಾಮರ್ಥ್ಯ ಕೇಂದ್ರಗಳ ವಿಶ್ವ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ತಿಳಿಸಿದೆ.

ಡಿಐಪಿಆರ್ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ನಗರದಲ್ಲಿ 1,100ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಜಿಸಿಸಿ ಕೇಂದ್ರಗಳನ್ನು ಹೊಂದಿರುವ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ.

2026ರ ಮೊದಲಾರ್ಧದಲ್ಲೇ 66 ಹೊಸ ಜಿಸಿಸಿ ಕೇಂದ್ರಗಳು ಬೆಂಗಳೂರಿನಲ್ಲಿ ಆರಂಭವಾಗಿವೆ. ಇದು ಕರ್ನಾಟಕದ ನವೋದ್ಯಮ ಪರಿಸರ ವ್ಯವಸ್ಥೆ ಹಾಗೂ ಪರಿಣತ ಮಾನವ ಸಂಪನ್ಮೂಲವನ್ನು ಪ್ರತಿಬಿಂಬಿಸುತ್ತದೆ ಎಂದು ಡಿಐಪಿಆರ್ ತಿಳಿಸಿದೆ.

ಹೂಡಿಕೆ, ನಾವೀನ್ಯತೆ ಹಾಗೂ ಗುಣಮಟ್ಟದ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಮೂಲಕ ಕರ್ನಾಟಕ ತನ್ನ ಬೆಳವಣಿಗೆಯ ವೇಗವನ್ನು ಮುಂದುವರಿಸಿದೆ ಎಂದು ಡಿಐಪಿಆರ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / SNEHA K

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada