ಧಾರವಾಡ, 05 ಆಗಸ್ಟ್ (ಹಿ.ಸ.):
ಆಯಂಕರ್:
ಧಾರವಾಡ ಜಿಲ್ಲೆ ಜಿಲ್ಲಾಧಿಕಾರಿಗಳವರ ನಿರ್ದೇಶನದ ಮೇರೆಗೆ ಖಾದಿ ಬಟ್ಟೆಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ತೆರೆಯಲು ಅವಕಾಶ ನೀಡಿದ್ದು, ಆಗಸ್ಟ್ 6 ಮತ್ತು 7, 2026 ರಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಖಾದಿ ಬಟ್ಟೆಗಳ ಮಾರಾಟ ಮಳಿಗೆಗಳನ್ನು ಪ್ರಾರಂಭಿಸಲಾಗಿದೆ.
ಈ ಮಾರಾಟ ಮಳಿಗೆಗಳು ಧಾರವಾಡ ಜಿಲ್ಲೆಯ ಅಧಿಕೃತ ಸಂಘ-ಸಂಸ್ಥೆಗಳಾದ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ (ಫೆ), ಬೆಂಗೇರಿ-ಹುಬ್ಬಳ್ಳಿ ಹಾಗೂ ಧಾರವಾಡ ತಾಲೂಕು ಗರಗ ಕ್ಷೇತ್ರೀಯ ಸೇವಾ ಸಂಘ, ಗರಗ ವತಿಯಿಂದ ಎರಡು ದಿನಗಳ ಕಾಲ ವಿವಿಧ ಬಗೆಯ ಗುಣಮಟ್ಟದ ಹಾಗೂ ವೈವಿಧ್ಯಮಯ ಖಾದಿ ಬಟ್ಟೆಗಳನ್ನು ಮಾರಾಟ ಮಾಡಲಾಗುತ್ತದೆ.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತಾತ್ಕಾಲಿಕ ಮಳಿಗೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ವಿವಿಧ ಇಲಾಖೆಗಳ ಎಲ್ಲಾ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಖಾದಿ ಮಾರಾಟ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.
