Wednesday, 27 Jan, 7.51 pm Hindusthan Samachar

ಸುದ್ದಿ
ಜೋತಿ ಬೆಳಗಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ಜಗಳೂರು ತಾಲ್ಲೂಕು ಜನಸ್ಪಂದನ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜೋತಿ ಬೆಳಗಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಗಳೂರು ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್. ವಿ.ರಾಮಚಂದ್ರ ವಹಿಸಿದ್ದರು.


ದಾವಣಗೆರೆ ಸಂಸದರಾದ ಜಿ.ಎಮ್. ಸಿದ್ದೇಶ್ವರ, ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಪದ್ಮ ಬಸವಂತಪ್ಪ, ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಜಿಲ್ಲೆಯ ಹಲ ಜನಪ್ತತುನಿಧಿಗಳು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Hindusthan Samachar Kannada
Top